ಸೌತ್ ಆಫ್ರಿಕಾ ವಿರುದ್ದ ಟೀಮ್ ಇಂಡಿಯಾ ಭರ್ಜರಿ ಜಯ!

ಸೌತ್ ಆಫ್ರಿಕಾ ವಿರುದ್ದ ಟೀಮ್ ಇಂಡಿಯಾ ಭರ್ಜರಿ ಜಯ!

ಬೆಂಗಳೂರು: ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಈ ಹಂತದಲ್ಲಿ ಜೊತೆಗೂಡಿದ ಯಶಸ್ವಿ ಜೈಸ್ವಾಲ್ ಹಾಗೂ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಇನ್ನು ಸೂರ್ಯಕುಮಾರ್ ಯಾದವ್ (100) ಅವರ ಈ ಶತಕದ ನೆರವಿನಿಂದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು.

202 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಮ್ಯಾಥ್ಯೂ ಬ್ರೀಟ್​ಝ್ಕೆ 4 ರನ್​ಗಳಿಸಿ ಔಟಾದರೆ, ರೀಝ ಹೆಂಡ್ರಿಕ್ಸ್​ 8 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದರು. ಇನ್ನು ನಾಯಕ ಐಡೆನ್ ಮಾರ್ಕ್ರಾಮ್ 25 ರನ್​ ಬಾರಿಸಿ ತಂಡಕ್ಕೆ ಆಸರೆಯಾಗಿ ನಿಂತರು.

ಆದರೆ ಜಡೇಜಾ ಎಸೆತದಲ್ಲಿ ಬಿರುಸಿನ ಹೊಡೆತಕ್ಕೆ ಮುಂದಾ ಮಾರ್ಕ್ರಾಮ್ ಕ್ಯಾಚ್ ನೀಡಿ ನಿರ್ಗಮಿಸಿದರು. ಇದರ ಬೆನ್ನಲ್ಲೇ ಹೆನ್ರಿಕ್ ಕ್ಲಾಸೆನ್ (5), ಡೆನೊವನ್ (12) ಹಾಗೂ ಆಂಡಿಲ್ ಫೆಹ್ಲುಕ್ವಾಯೊ (0) ವಿಕೆಟ್ ಒಪ್ಪಿಸಿದರು.

ಇತ್ತ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಟೀಮ್ ಇಂಡಿಯಾ ಬೌಲರ್​ಗಳು ಅಂತಿಮವಾಗಿ ಸೌತ್ ಆಫ್ರಿಕಾ ತಂಡವನ್ನು13.5 ಓವರ್​ಗಳಲ್ಲಿ 95 ರನ್​ಗಳಿಗೆ ಆಲೌಟ್ ಮಾಡುವ ಮೂಲಕ 106 ರನ್​​ಗಳ ಭರ್ಜರಿ ಜಯ ಸಾಧಿಸಿದೆ. ಟೀಮ್ ಇಂಡಿಯಾ ಪರ ಕುಲ್ದೀಪ್ ಯಾದವ್ 2.5 ಓವರ್​ಗಳಲ್ಲಿ ಕೇವಲ 17 ರನ್​ ನೀಡಿ 5 ವಿಕೆಟ್ ಕಬಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos