ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ: ಭಾರತ ತಂಡ ಪ್ರಕಟ

ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ: ಭಾರತ ತಂಡ ಪ್ರಕಟ

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ -20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವಿವಿಎಸ್ ಲಕ್ಷ್ಮಣ್ ಈ ಸರಣಿಗೆ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ನಿನ್ನೆ ಸಂಜೆ ತಂಡ ಪ್ರಕಟಿಸಲಾಗಿದ್ದು, ವಿಶ್ವಕಪ್​ನಲ್ಲಿ ಆಡಿರುವ ಭಾರತ ತಂಡದ ಎಲ್ಲ ಹಿರಿಯ ಆಟಗಾರರಿಗೆ ಈ ಟೂರ್ನಿಯಿಂದ ವಿಶ್ರಾಂತಿ ನೀಡಲಾಗಿದೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮಹಮದ್ ಶಮಿ, ಮಹಮದ್ ಸಿರಾಜ್ ಸೇರಿದಂತೆ ತಂಡದ ಎಲ್ಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ವಿಶ್ವಕಪ್ ನಲ್ಲಿ ತಂಡದ ಬೆಂಚ್ ಸ್ಟ್ರೆಂತ್ ಆಗಿದ್ದ ಇಶಾನ್ ಕಿಶನ್, ಪ್ರಸಿದ್ಧ್ ಕೃಷ್ಣ ಸೇರಿದಂತೆ ಯುವ ಆಟಗಾರರಿಗೆ ಸರಣಿಯಲ್ಲಿ ಅವಕಾಶ ನೀಡಲಾಗಿದೆ.

ಏಷ್ಯನ್ ಗೇಮ್ಸ್​ನ ಕ್ರಿಕೆಟ್​ ತಂಡದ ನಾಯಕತ್ವ ವಹಿಸಿದ್ದ ಋತುರಾಜ್ ಗಾಯಕ್ವಾಡ್​ಗೆ ಉಪನಾಯಕನ ಸ್ಥಾನ ನೀಡಲಾಗಿದೆ. ಅದೇ ರೀತಿ ಶರೇಯಸ್​ ಅಯ್ಯರ್​ ಕೊನೇ ಎರಡು ಪಂದ್ಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಅವಧಿಯಲ್ಲಿ ಶ್ರೇಯಸ್​ ಉಪನಾಯಕನ ಸ್ಥಾನ ಪಡೆದುಕೊಳ್ಳಲಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos