ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಇಲ್ಲ

ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಇಲ್ಲ

ಬೆಂಗಳೂರು,ಡಿ.20 : ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವ ಯಾವುದೇ ಯೋಚನೆ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಮಾಧ್ಯಮಗಳ ಎದುರು ಮಾತನಾಡಿದ್ದ ಸಚಿವ ಬಿ. ಶ್ರೀರಾಮುಲು, “ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಿ ವಾಲ್ಮೀಕಿ ಅನ್ನ ಕುಟೀರ ಎಂದು ಹೆಸರಿಡಲಾಗುವುದು” ಎಂದು ತಿಳಿಸಿದ್ದರು. ರಾಮುಲು ಅವರ ಈ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಮಟ್ಟದ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು.ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿಯೇ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಮತ್ತು ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಮಾತುಕತೆ ನಡೆಸಿರುವ ವಿಡಿಯೋ ಬಿಡುಗಡೆಯಾಗಿದ್ದು, ಈ ವಿಡಿಯೋದಲ್ಲಿ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಯಾವುದೇ ಯೋಚನೆ ಇಲ್ಲ ಎಂದು ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ಹೌದು ನಮಗೇನು ಅದೇ ಕೆಲಸವೇ? ಎಂದು ಶ್ರೀನಿವಾಸ ಪ್ರಸಾದ್ ಸಹ ಸಿಎಂ ಮಾತಿಗೆ ದ್ವನಿಗೂಡಿಸಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos