ಪರೋಕ್ಷವಾಗಿ ಹೆಚ್‌ ಡಿ ಕೆ ಗೆ ಟಾಂಗ್‌ ಕೊಟ್ಟ ಚಲುವರಾಯಸ್ವಾಮಿ

ಪರೋಕ್ಷವಾಗಿ ಹೆಚ್‌ ಡಿ ಕೆ ಗೆ ಟಾಂಗ್‌ ಕೊಟ್ಟ ಚಲುವರಾಯಸ್ವಾಮಿ

ಬೆಂಗಳೂರು: ಮಂಡ್ಯ ನಗರದ ಬಂದೀಗೌಡ ಬಡಾವಣೆಯಲ್ಲಿರುವ ಲೋಕಸಭಾ ಅಭ್ಯರ್ಥಿ ಸ್ಟಾರ್‌ಚಂದ್ರು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಎನ್.ಚಲುವರಾಯಸ್ವಾಮಿ ಅವರು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಮಂಡ್ಯ ಜಿಲ್ಲೆಯ ಜನ ಬುದ್ಧಿವಂತರು. ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಹೊರಗಿನವರಿಗೆ ಭಾವನಾತ್ಮಕವಾಗಿ ಎಂದೂ ಮಣಿದಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಕುಮಾರಸ್ವಾಮಿ ಅವರು ಒಂದು ಕಡೆ ಹೋದಾಗ ಅದು ನನ್ನ ಕರ್ಮಭೂಮಿ ಎನ್ನುತ್ತಾರೆ. ರಾಮನಗರ, ಮಂಡ್ಯ, ಚನ್ನಪಟ್ಟಣದಲ್ಲೂ ಅದೇ ಮಾತು ಹೇಳುತ್ತಾರೆ. ರಾಮನಗರವನ್ನು ಪೂರ್ಣವಾಗಿ ತಿರಸ್ಕರಿಸಿ ಮಂಡ್ಯಕ್ಕೆ ಬರುವರೋ ಅಥವಾ ಅರ್ಧಕ್ಕೆ ಬಿಟ್ಟು ಇಲ್ಲಿಗೆ ಬರುವರೋ ಅಥವಾ ಕೊನೇ ಘಳಿಗೆಯಲ್ಲಿ ಬೇರೆ ಯಾರನ್ನಾದರೂ ಕಣಕ್ಕಿಳಿಸುವರೋ ಗೊತ್ತಿಲ್ಲ ಎಂದು ಹೇಳಿದರು.

ಮೂರು ಬಾರಿ ಮುಖ್ಯಮಂತ್ರಿ ಮಾಡಿದ ರಾಮನಗರವನ್ನು ನನ್ನ ಪ್ರಾಣ ಇರೋವರೆಗೂ ಬಿಟ್ಟುಹೋಗೋಲ್ಲ ಎನ್ನುತ್ತಿದ್ದರು. ಈಗ ರಾಮನಗರ ಬಿಟ್ಟು ಮಂಡ್ಯಕ್ಕೆ ಹೋಗುತ್ತಿದ್ದಾರೆ ಎಂದು ಅಲ್ಲಿಯ ಜನರೇ ಹೇಳುತ್ತಿದ್ದಾರೆ. ಈಗ ಏನು ನಿರ್ಧಾರ ಮಾಡುವರೋ ನೋಡಬೇಕಿದೆ ಎಂದರು. ಕಾಂಗ್ರೆಸ್‌ಗೆ ಜನಾಶೀರ್ವಾದ ಎಂದ ಸಚಿವ ಕುಮಾರಸ್ವಾಮಿ ಅವರು ದೇವೇಗೌಡರ ಮಗ, ಮಾಜಿ ಮುಖ್ಯಮಂತ್ರಿ. ಅಲ್ಲದೆ, ರಾಜ್ಯದ ನಾಯಕ. ಅವರ ಬಗ್ಗೆ ಗೌರವವಿದೆ. ನಾವು ಯಾರ ಬಗ್ಗೆಯೂ ಲಘುವಾಗಿ ಮಾತನಾಡುವುದಿಲ್ಲ. ಹೊರಗಿನವರಿಗೆ ಜಿಲ್ಲೆಯ ಜನರು ಅಷ್ಟು ಸುಲಭವಾಗಿ ಅವಕಾಶ ನೀಡಿಲ್ಲ. ಭಾವನಾತ್ಮಕವಾಗಿ ಮಣಿದಿರುವ ನಿದರ್ಶನಗಳೂ ಇಲ್ಲ. ನಮ್ಮ ಅಭಿವೃದ್ಧಿ ನೋಡಿಕೊಂಡು ಜನರು ನಮಗೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಒಮ್ಮೆ ಮಂಡ್ಯ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೂ ನಮ್ಮ ಚುನಾವಣೆ ನಾವು ಮಾಡುತ್ತೇವೆ. ನಾವು ಜನರ ಮುಂದೆ ನಮ್ಮ ಕೆಲಸ ಇಟ್ಟುಕೊಂಡು ಹೋಗುತ್ತೇವೆಯೇ ವಿನಃ ನಾವು ಯಾವುದು ಸುಲಭ, ಕಷ್ಟ ಎಂದು ಜನರ ಮುಂದೆ ಹೋಗುವುದಿಲ್ಲ ಎಂದರು.

 

ಫ್ರೆಶ್ ನ್ಯೂಸ್

Latest Posts

Featured Videos