ಬೆಂಗಳೂರು, ಆ.11: ಇಂದಿರಾ ಕ್ಯಾಂಟೀನ್ಗೆ ಆಹಾರ ಪೂರೈಕೆ ಮಾಡುತ್ತಿರುವ ಗುತ್ತಿಗೆದಾರರ ಗುತ್ತಿಗೆ ಅವಧಿ ಆ.15ಕ್ಕೆ ಮುಕ್ತಾಯಗೊಳ್ಳಲಿದೆ. ಈಗಾಗಲೇ ಬಿಬಿಎಂಪಿ ಹೊಸ ಗುತ್ತಿಗೆ ಪ್ರಕ್ರಿಯೆ ಆರಂಭಿಸಿದೆ. ಆದರೆ, ರಾಜ್ಯಸರ್ಕಾರ ರೂಪಿಸಿರುವ ಟೆಂಡರ್ ಆಹ್ವಾನಿಸುವ ವೆಬ್ಸೈಟ್ನಲ್ಲಿಯೇ ಪಾಲಿಕೆ ಟೆಂಡರ್ ಆಹ್ವಾನ ಮಾಡಬೇಕು. ವೆಬ್ಸೈಟ್ನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಟೆಂಡರ್ ಪ್ರಕ್ರಿಯೆ ವಿಳಂಬವಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಈಗಿರುವ ಗುತ್ತಿಗೆದಾರರೇ ಇಂದಿರಾ ಕ್ಯಾಂಟೀನ್ಗಳಿಗೆ ಆಹಾರ ಸರಬರಾಜು ಮಾಡಲಿದ್ದಾರೆ. ಆಹಾರ ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಅವರು ತಿಳಿಸಿದರು.
ರಾಜ್ಯದ ಬಡ ಜನರ ಹಸಿವು ನೀಗಿಸಲು ಆರಂಭವಾದ ಇಂದಿರಾ ಕ್ಯಾಂಟೀನ್ ಗೆ ಇದೀಗ ಕಂಟಕ ಎದುರಾಗಿದೆ. ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರಿಗೆ ಸೂಚನೆ ಸಿಗದಿದ್ದಲ್ಲಿ ಆಗಸ್ಟ್ 15ಕ್ಕೆ ಇಂದಿರಾ ಕ್ಯಾಂಟೀನ್ ಬಾಗಿಲು ಮುಚ್ಚುವ ಸಂಭವವಿದೆ. ಇಂದಿರಾ ಕ್ಯಾಂಟೀನ್ ಟೆಂಡರ್ ಇದೇ ಆಗಸ್ಟ್ 15ಕ್ಕೆ ಮುಗಿಯಲಿದ್ದು, ಹೊಸ ಟೆಂಡರ್ ಗೆ ಅನುಮೋದನೆ ನೀಡದಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಆ. 15ಕ್ಕೆ ಟೆಂಡರ್ ಪ್ರಕ್ರಿಯ ಫೈನಲ್ ಆಗುವುದು ಅನುಮಾನವಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರಂಭವಾದ ಇಂದಿರಾ ಕ್ಯಾಂಟೀನ್ ಯೋಜನೆಗೆ ಬ್ರೇಕ್ ಬೀಳುತ್ತಾ ಎನ್ನುವ ಅನುಮಾನ ವ್ಯಕ್ತವಾಗಿದೆ.