ಇಂದು ಬೃಹತ್ ಸಮಾವೇಶಕ್ಕೆ ಚಿಕ್ಕೋಡಿ ಸಜ್ಜು

ಇಂದು ಬೃಹತ್ ಸಮಾವೇಶಕ್ಕೆ ಚಿಕ್ಕೋಡಿ ಸಜ್ಜು

ಬೆಳಗಾವಿ, ಏ. 19, ನ್ಯೂಸ್ ಎಕ್ಸ್ ಪ್ರೆಸ್: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸಂಜೆ 5 ಗಂಟೆಗೆ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರಾರ್ಥ ತಾಲೂಕು ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಜರುಗಲಿದ್ದು, ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ.

ಕಾಂಗ್ರೆಸ್ ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಪಕ್ಷದ ಮುಖಂಡರ ಜತೆಗೂಡಿ ರಾಹುಲ್ ಗಾಂಧಿ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು.

ನಂತರ ಮಾತನಾಡಿದ ಅವರು, ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಿದ್ಧಗೊಂಡಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ, ಆರ್.ವಿ.ದೇಶಪಾಂಡೆ, ಕೇಂದ್ರದ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಈಶ್ವರ ಖಂಡ್ರೆ, ಡಿ.ಕೆ. ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭಾಗವಹಿಸಲಿದ್ದಾರೆ  ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos