ಇಂದು ನಿಖಿಲ್ ಪರ ಆಂಧ್ರ ಸಿಎಂ ನಾಯ್ಡು ಮತ ಪ್ರಚಾರ

ಇಂದು ನಿಖಿಲ್ ಪರ ಆಂಧ್ರ ಸಿಎಂ ನಾಯ್ಡು ಮತ ಪ್ರಚಾರ

ಮಂಡ್ಯ, ಏ. 15, ನ್ಯೂಸ್ ಎಕ್ಸ್ ಪ್ರೆಸ್: ಇಂದು ಸಂಜೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.

ಪಾಂಡವಪುರದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಚಂದ್ರಬಾಬು ನಾಯ್ಡು ಪಾಲ್ಗೊಳ್ಳಲಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಮಂಡ್ಯ ಜಿಲ್ಲೆಯ ಸಚಿವರು, ಶಾಸಕರು ಹಾಗೂ ಸ್ಥಳೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಜೆಡಿಎಸ್ ಕೊನೆ ಗಳಿಗೆಯಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡಿದ್ದು, ಅಭ್ಯರ್ಥಿ ನಿಖಿಲ್ ಗೆಲುವಿಗೆ ಶತಾಯ-ಗತಾಯ ಪ್ರಯತ್ನ ನಡೆಸುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos