ಇನ್ಫೋಸಿಸ್ ಪ್ರಶಸ್ತಿ ಪ್ರಕಟ

ಇನ್ಫೋಸಿಸ್ ಪ್ರಶಸ್ತಿ ಪ್ರಕಟ

ಬೆಂಗಳೂರು, ನ. 7 : ಅತ್ಯುತ್ತಮ ಸಂಶೋಧನೆಗಾಗಿ ನೀಡುವ 2019ನೇ ಪ್ರಶಸ್ತಿಗಳನ್ನು 6 ವಲಯಗಳಲ್ಲಿನ ಸಾಧಕರಿಗೆ ಪ್ರಕಟಿಸಿದೆ.  ಇನ್ಫೋಸಿಸ್ ಸೈನ್ಸ್ ಫೌಂಡೇಶನ್ ನೀಡಲಾಗುವ ಇನ್ಫೋಸಿಸ್ ಪ್ರಶಸ್ತಿ ಪ್ರಕಟವಾಗಿದೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಯ ಪ್ರೊ. ಜಿ. ಮುಗೇಶ್ ಅವರಿಗೆ ಭೌತಿಕ ವಿಜ್ಞಾನದಲ್ಲಿ ಪ್ರಶಸ್ತಿ ಲಭಿಸಿದ್ದರೆ, ಮಾನವೀಯತೆ ಕ್ಷೇತ್ರದಲ್ಲಿ ಮಂಡಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ ಪ್ರೊ. ಮನು ವಿ. ದೇವದೇವನ್ ಅವರಿಗೆ ಪ್ರಶಸ್ತಿ ಸಂದಿದೆ.

ಜೀವ ವಿಜ್ಞಾನ ವಿಭಾಗದಲ್ಲಿ ಹೈದರಾಬಾದ್ನ ವಿಜ್ಞಾನಿ ಡಾ. ಮಂಜುಳಾ ರೆಡ್ಡಿ, ಗಣಿತ ವಿಜ್ಞಾನದಲ್ಲಿ ಜ್ಯೂರಿಚ್ನ ಪ್ರೊ. ಸಿದ್ಧಾರ್ಥ ಮಿಶ್ರಾ, ಸಾಮಾಜಿಕ ವಿಜ್ಞಾನ ವಿಭಾಗದಲ್ಲಿ ಪ್ರೊ. ಆನಂದ್ ಪಾಂಡಿಯನ್, ಎಂಜಿನಿಯರ್ ಮತ್ತು ಕಂಪ್ಯೂಟರ್ ವಿಭಾಗದಲ್ಲಿ ಐಐಟಿ ಬಾಂಬೆಯ ಪ್ರೊ. ಸುನೀತಾ ಸುರವಗಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು ಚಿನ್ನದ ಪದಕ ಮತ್ತು 1 ಲಕ್ಷ ಅಮೆರಿಕನ್ ಡಾಲರ್ (ಸುಮಾರು 70 ಲಕ್ಷ ರೂಪಾಯಿ) ಮೊತ್ತದ ಬಹುಮಾನವನ್ನು ಒಳಗೊಂಡಿದೆ.

ಫ್ರೆಶ್ ನ್ಯೂಸ್

Latest Posts

Featured Videos