ಬೆಂಗಳೂರು, ಅ. 15: ಸೆಕ್ಯೂರಿಟಿ ಪೋರ್ಸ್ ಎಂಬ ಸೆಕ್ಯೂರಿಟಿ ಏಜೆನ್ಸಿಯ ಮಾಲಿಕ ತನ್ನ ನೌಕರರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಇಬ್ಬರು ಅಸ್ಸಾಂ ಮೂಲದ ಸೆಕ್ಯೂರಿಟಿ ಕೆಲಸ ಮಾಡುವ ಉದ್ಯೋಗಿಗಳ ಮೇಲೆ ಮಾಲಿಕ ಸಲೀಂ ಖಾನ್ ಹಾಗೂ ಐವರು ಹಲ್ಲೆ ಮಾಡಿದ್ದಾರೆ.
ಈ ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದು, ಪ್ರಮುಖ ಆರೋಪಿ ಸಲೀಂ ಖಾನ್ ನಾಪತ್ತೆಯಾಗಿದ್ದಾನೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಇಷಾ ಪಂತ್ ಹೇಳಿಕೆ ನೀಡಿದ್ದಾರೆ. ಹಲ್ಲೆಗೊಳಗಾದವರೂ ಸಹ ನಾಪತ್ತೆಯಾಗಿದ್ದು, ಅವರನ್ನು ಹುಡುಕಲಾಗುತ್ತಿದೆ. ಸದ್ಯ ಐಪಿಸಿ೩೦೭ ಕಾಯ್ದೆಯಡಿ ಎಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.