ಐಎನ್ಎಸ್ ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಬೆಂಕಿ

ಐಎನ್ಎಸ್ ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಬೆಂಕಿ

ಕಾರವಾರ, 26, ನ್ಯೂಸ್ ಎಕ್ಸ್ ಪ್ರೆಸ್: ಐಎನ್ಎಸ್ ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಾರವಾರದ ಸೀಬರ್ಡ್ ನೌಕಾನೆಲೆಯಲ್ಲಿ ಘಟನೆ ಸಂಭವಿಸಿದ್ದು, ಒಬ್ಬ ತಾಂತ್ರಿಕ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ 7 ಜನರ ಸ್ಥಿತಿ ಗಂಭೀರವಾಗಿದೆ. ಪಾಕ್ ಗಡಿಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ಗುಜರಾತ್ ಗೆ ತೆರಳಿದ್ದ ಐಎನ್ ಎಸ್ ವಿಕ್ರಮಾದಿತ್ಯ, ಇಂದು ಮುಂಜಾನೆ ಕಾರವಾರದ ಸೀಬರ್ಡ್ ನೌಕಾನೆಲೆಗೆ ವಾಪಸ್ಸಾಗಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಬಾಯ್ಲರ್ ಕಂಪಾರ್ಟ್ ಮೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

 

ಫ್ರೆಶ್ ನ್ಯೂಸ್

Latest Posts

Featured Videos