ಮೀಸಲಾತಿ ಅಂಗೀಕಾರಕ್ಕೆ ಒತ್ತಾಯ

ಮೀಸಲಾತಿ ಅಂಗೀಕಾರಕ್ಕೆ ಒತ್ತಾಯ

ತುಮಕೂರು: ಪ್ರಸ್ತುತ ಅಧಿವೇಶನದಲ್ಲಿ ಪರಿಶಿಷ್ಟ ವರ್ಗದ ಮೀಸಲಾತಿಯನ್ನು ಹೆಚ್ಚಿಸುವ ನಿರ್ಣಯವನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಿದಿದ್ದರೆ ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಶಾಂತಲ ರಾಜಣ್ಣ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿಯೇ ಶೇ೭.೫ರ ಮೀಸಲಾತಿಗೆ ಅವಕಾಶವಿದ್ದರೂ ಕರ್ನಾಟಕದಲ್ಲಿ ರಾಜಕೀಯ ಕ್ಷೇತ್ರವನ್ನು ಹೊರತುಪಡಿಸಿ, ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಪಂಗಡದವರಿಗೆ ಶೇ೭.೫ರ ಮೀಸಲಾತಿ ಯನ್ನು ವಿಸ್ತರಿಸಿಲ್ಲ. ಇದರ ಜೊತೆಗೆ ಬೇರೆ ಬೇರೆ ಸಮುದಾಯಗಳನ್ನು ತಂದು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುತ್ತಿದೆ. ಎಷ್ಟು ಸಮುದಾಯಗಳನ್ನು ಬೇಕಾದರೂ ಪರಿಶಿಷ್ಟ ಪಂಗಡಕ್ಕೆ ಸೇರಿಸಿ,ಆದರೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಿ ಎಂಬುದು ನಮ್ಮ ಒತ್ತಾಯವಾಗಿದೆ ಎಂದರು.

ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಶೇ೭.೫ರ ಮೀಸಲಾತಿಗೆ ಸಂಬಂದಿಸಿದಂತೆ ವಸ್ತುನಿಷ್ಠ ವರದಿ ನೀಡಲು ನ್ಯಾ.ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ನೀಡಲು ಸೂಚಿಸಿತ್ತು. ಅವರು ವರದಿ ನೀಡಿದ ವರ್ಷಗಳೇ ಕಳೆದರೂ ಇದುವರೆಗೂ ಮೀಸಲಾತಿ ನೀಡುವಲ್ಲಿ ಮೀನಾವೇಷ ಎಣಿಸುತ್ತಿದೆ. ಇದು ತರವಲ್ಲ. ನಮ್ಮ ಬೇಡಿಕೆ ಈಡೇರದಿದ್ದರೆ ಹೋರಾಟ ಅನಿವಾರ್ಯ ಎಂದು ದೊಡ್ಡಯ್ಯ ನುಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos