ಸ್ವಯಂ ರಕ್ತದಾನ ಮಾಡಿ ಪ್ರಾಣ ಉಳಿಸಿದ ಗಿರಿನಗರ ಠಾಣೆ ಇನ್ಸ್ ಪೆಕ್ಟರ್ ಸಿದ್ದಲಿಂಗಯ್ಯ

ಸ್ವಯಂ ರಕ್ತದಾನ ಮಾಡಿ ಪ್ರಾಣ ಉಳಿಸಿದ ಗಿರಿನಗರ ಠಾಣೆ ಇನ್ಸ್ ಪೆಕ್ಟರ್ ಸಿದ್ದಲಿಂಗಯ್ಯ

ಶೇಖರ್ ಎಂಬ ರಿಯಲ್ ಎಸ್ಠೇಟ್ ದಲ್ಲಾಳಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿ, ಶಿಕ್ಷಕಿ ತನುಜಾ ನಡು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರು. ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿ ಈ ಘಟನೆ ನಡೆದಿತ್ತು. ಮಾಹಿತಿ ಸಿಕ್ಕ ತಕ್ಷಣ ಗಿರಿನಗರ ಠಾಣೆಯ ಇನ್ಸ್​​ಪೆಕ್ಟರ್​​ ಸಿದ್ದಲಿಂಗಯ್ಯ ಸ್ಥಳಕ್ಕೆ ಧಾವಿಸಿದ್ದಾರೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಶಿಕ್ಷಕಿಯನ್ನು ಇನ್ಸ್​​ಪೆಕ್ಟರ್​​ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ತನುಜಾ ತೀವ್ರ ಹಲ್ಲೆಗೆ ಒಳಗಾಗಿದ್ದರಿಂದ ರಕ್ತಸ್ರಾವವಾಗಿ ನಿತ್ರಾಣಗೊಂಡಿದ್ದರು. ಹೆಚ್ಚುವರಿ ರಕ್ತದ ಅವಶ್ಯಕತೆ ಇದೆ, ತುರ್ತಾಗಿ ರಕ್ತ ಬೇಕು ಎಂದು ವೈದ್ಯರು ಸೂಚಿಸಿದ್ದರು. ತಕ್ಷಣವೇ, ಇನ್ಸ್ ಪೆಕ್ಟರ್ ಸಿದ್ದಲಿಂಗಯ್ಯ ಗಾಯಾಳು ತನುಜಾಗೆ ರಕ್ತ ನೀಡಿ ಪ್ರಾಣ ಉಳಿಸಿದ್ದಾರೆ. ಸದ್ಯ ಶಿಕ್ಷಕಿ ತನುಜಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿರುವ ತನುಜಾ ಹೊಸಕೆರೆಹಳ್ಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸ್ತುತ್ಯಾರ್ಹ ಸೇವೆ ಮಾಡಿದ ಗಿರಿನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಸಿದ್ದಲಿಂಗಯ್ಯನವರಿಗೆ ನಾಡಿನಲ್ಲೆಡೆಯಿಂದ ಭರಪೂರ ಪ್ರಶಂಸೆಗಳ ಸುರಿಮಳೆ ಆಗುತ್ತಿದೆ. ನಗರ ಪೊಲೀಸ್ ಆಯಕ್ತ ಪ್ರಶಂಸಾ ಪತ್ರದೊಂದಿಗೆ ನಗದು ಬಹುಮಾನ ಘೋಷಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos