ಪೌರತ್ವ ಕಾಯ್ದೆ ಬಗ್ಗೆ ಅರಿವು ಮೂಡಿಸಿದ ಇನ್ಸ್ಪೆಕ್ಟರ್

ಪೌರತ್ವ ಕಾಯ್ದೆ ಬಗ್ಗೆ ಅರಿವು ಮೂಡಿಸಿದ ಇನ್ಸ್ಪೆಕ್ಟರ್

ಬೆಂಗಳೂರು, ಡಿ. 22 : ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅದರಲ್ಲೂ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪ್ರತಿಭಟನೆ ಕಾವು ಜೋರಾಗಿದೆ. ಇದರ ಮಧ್ಯದಲ್ಲಿ ಇಬ್ಬರು ಗೋಲಿಬಾರ್ ಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ಹೆಚ್ ಎಸ್ ಆರ್ ಲೇಔಟ್ ಇನ್ಸ್ಪೆಕ್ಟರ್ ಪೌರತ್ವ ಕಾಯ್ದೆ ಬಗ್ಗೆ ಅರಿವು ಮೂಡಿಸುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ಹೆಚ್ಎಸ್ಆರ್ ಲೇ ಔಟ್ ಮಸೀದಿಗಳಿಗೆ ತೆರಳಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಿದ್ದಾರೆ. ಗಲಭೆ, ಹಿಂಸಾಚಾರವಾಗುತ್ತಿದ್ದರೆ ಜನರಲ್ಲಿ ಅರಿವು ಮೂಡಿಸುವುದು ಅತ್ಯಂತ ಉತ್ತಮ ಪರಿಹಾರ ಎಂಬುದನ್ನ ಅರಿತ ಇವರು, ಎರಡು ಮಸೀದಿಗಳಿಗೆ ಹೋಗಿ ಮುಸ್ಲಿಮರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು. ಖಾಕಿ ಧಿರಿಸಿನಲ್ಲಿ ಹೋಗಿ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡಬೇಡಿ, ಏನೇ ಮಾಡುವುದಿದ್ದರೂ ಮೊದಲು ನಿಜವಾದ ಸಂಗತಿಯೇನೆಂದು ತಿಳಿದುಕೊಂಡು ಮುಂದುವರಿಯಿರಿ. ಏನಾದರೂ ಸಂದೇಹಗಳು ಬಂದರೆ ಬಂದು ನಮ್ಮ ಬಳಿ ಬಂದು ಮೊದಲು ವಿಷಯ ತಿಳಿದುಕೊಳ್ಳಿ, ತಪ್ಪು ದಾರಿಗಿಳಿಯಬೇಡಿ ಎಂದರು

ಫ್ರೆಶ್ ನ್ಯೂಸ್

Latest Posts

Featured Videos