ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಯಶಸ್ವಿ

ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಯಶಸ್ವಿ

ಕೊಪ್ಪಳ: ತಾಲೂಕಿನ ಹಲಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವದಗನಾಳ ಗ್ರಾಮದಲ್ಲಿ ಅನ್ವಿತ ಮಹಿಳೆಯರ ವೃದ್ಧರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ರೇವಣಕಿ ಹಾಗೂ ಕೆಎಚ್‌ಪಿಟಿ ಕೊಪ್ಪಳ ಇವರ ಸಹಯೋಗದಲ್ಲಿ ಸ್ಪೂರ್ತಿ ಹದಿಹರೆಯದ ಹೆಣ್ಣುಮಕ್ಕಳ ಮಾದರಿ ಯೋಜನೆ ಕೊಪ್ಪಳ ವತಿಯಿಂದ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಆವರ್ಡ್ಸ್ ಸಂಸ್ಥೆಯ ಕಾರ್ಯದರ್ಶಿಗಳಾದ ಸುನಿಲ್ ಕುಮಾರ್ ಬೆಲ್ಲದ್ ನೆರವೇರಿಸಿದರು.
ಕೆಎಚ್‌ಪಿಟಿಯ ಫೀಲ್ಡ್ ಆಫೀಸರ್ ಮಲ್ಲಪ್ಪ ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ಆಚರಿಸುವ ಉದ್ದೇಶ, ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವುದು, ಲಿಂಗ ಅಸಮಾನತೆಯನ್ನು ಹೋಗಲಾಡಿಸುವುದು, ಸರ್ಕಾರದ ಎಲ್ಲಾ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುತ್ತಾ ಹೆಣ್ಣುಮಕ್ಕಳು ಈ ಸಮಾಜದಲ್ಲಿ ಬಲಿಷ್ಠರಾಗಬೇಕು. ಸಮಾಜದ ಎಲ್ಲ ರಂಗದಲ್ಲಿ ಭಾಗವಹಿಸಿ ಮುನ್ನುಗ್ಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಎಸ್‌ಎಲ್‌ಸಿ ತೇರ್ಗಡೆಯಾದ ಸ್ಪೂರ್ತಿ ಪ್ರಾಜೆಕ್ಟ್ನ ಹೆಣ್ಣುಮಕ್ಕಳಿಗೆ ಅವರ್ಡ್ಸ್ ಸಂಸ್ಥೆಯ ವತಿಯಿಂದ ಪ್ರಶಂಸನಾ ಪತ್ರವನ್ನು ವಿತರಿಸಲಾಯಿತು. ಎಸ್. ಬಿ. ಐ ನಿರುದ್ಯೋಗ ತರಬೇತಿ ಕೇಂದ್ರದ ರೂಪಾ ರವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರಸ್ವತಿ ರವರು ಅವಾರ್ಡ್ಸ ಸಂಸ್ಥೆಯ ಅಧ್ಯಕ್ಷರಾದ ಅನ್ನದಾನೇಶ್ವರ ಎಲಿಗಾರ, ಶಾಲಾ ಶಿಕ್ಷಕರು, ಗ್ರಾಮ ಪಂಚಾಯಿತಿ ಪಿಡಿಒ ಅಶೋಕ್ ಪತ್ತಾರ, ಗ್ರಾಮ್ ಪಂಚಾಯತ್ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಆಶಾ ಕಾರ್ಯಕರ್ತರು ಗ್ರಾಮದ ಗುರು ಹಿರಿಯರು ಯುವಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇತರರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos