ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ ಖಚಿತ

ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ ಖಚಿತ

ಬೆಂಗಳೂರು, ಮೇ . 28, ನ್ಯೂಸ್ ಎಕ್ಸ್ ಪ್ರೆಸ್: ಕರ್ನಾಟಕದ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ.

ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ 10 ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ.

ಆ ಬಳಿಕ ಅಣ್ಣಾಮಲೈ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗಿದ್ದು, ಡಿಎಂಕೆ ಪಕ್ಷದಿಂದ ಅವರು, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆಂದು ಹೇಳಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos