ಬಾಂಬ್ ಇಟ್ಟಿದ್ದು ಇವನೆನಾ?

ಬಾಂಬ್ ಇಟ್ಟಿದ್ದು ಇವನೆನಾ?

ಮಂಗಳೂರು, ಜ. 22: ಮಂಗಳೂರು ವಿಮಾನನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿ ಆದಿತ್ಯರಾವ್ ಪೊಲೀಸರಿಗೆ ಶರಣಾಗಿದ್ದು, ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಉಡುಪಿಯ ಮಣಿಪಾಲ ನಿವಾಸಿ ಆದಿತ್ಯ ರಾವ್ (40) ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಈ ವೇಳೆ ಪೊಲೀಸರು ತನಿಖೆ ನಡೆಸಿದ್ದು, ಈ ವೇಳೆ ಆರೋಪಿ ಆದಿತ್ಯ ರಾವ್ ನಾನೇ ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ಒಪ್ಪಿಕೊಂಡಿದ್ದಾನೆ.

ಸದ್ಯ ಪೊಲೀಸರು ಮೆಡಿಕಲ್ ಟೆಸ್ಟ್ ಗಾಗಿ ಆರೋಪಿ ಆದಿತ್ಯರಾವ್ ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos