ಐಟಿ ಮುಂದೆ ಪರಂ ಹಾಜರ

ಐಟಿ ಮುಂದೆ ಪರಂ ಹಾಜರ

ಬೆಂಗಳೂರು, ಅ. 21 : ಅ.10ರಂದು ಪರಮೇಶ್ವರ್ ಅವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ದಾಳಿ ನಡೆಸಿತ್ತು. ಇತ್ತೀಚೆಗೆ ಐಟಿ ದಾಳಿಗೆ ಒಳಗಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದು ಆದಾಯ ತೆರಿಗೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಸುಮಾರು 25 ಕಡೆ ತಪಾಸಣೆ ನಡೆಸಿ ಐದು ಕೋಟಿಗೂ ಹೆಚ್ಚಿನ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಅದಕ್ಕೆ ಸಂಬಂಧಪಟ್ಟಂತೆ ಕಳೆದ ವಾರ ಪರಮೇಶ್ವರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿತ್ತು. ವಿಚಾರಣೆಗೆ ಆಗಮಿಸಿದ ಪರಮೇಶ್ವರ್ ಉತ್ತರ ನೀಡಲು ಕಾಲಾವಕಾಶ ಕೇಳಿದ್ದರು. ಅದರಂತೆ ಇಂದು ಬೆಳಗ್ಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos