ಬೆಂಗಳೂರು, ಅ. 10: ಇಂದು ಐಟಿ ಅಧಿಕಾರಿಗಳು ಮಾಜಿ ಡಿಸಿಎಂ ಪರಮೇಶ್ವರ್ ಅವರಿಗೆ ಐಟಿ ಶಾಕ್ ನೀಡಿದ್ದು, ಪರಮೇಶ್ವರ್ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಮಾಡಿದ್ದಾರೆ.
ತುಮಕೂರಿನಲ್ಲಿರುವ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜುಗಳ ಮೇಲೆ ಬೆಂಗಳೂರು ಐಟಿ ಸೆಲ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರಷ್ಟೇ ಅಲ್ಲ, ನೆಲಮಂಗಲದಲ್ಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನೆಲಮಂಗಲದಲ್ಲಿರುವ ಪರಮೇಶ್ವರ್ ಒಡೆತನದ ಮೆಡಿಕಲ್ ಕಾಲೇಜು ಮೇಲೆ ದಾಳಿ ಮಾಡಿದ್ಧಾರೆ. ಜೊತೆಗೆ ಸದಾಶಿವನಗರದ ಅವರ ಮನೆ ಮೇಲೂ ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಶಿಕ್ಷಣ ಸಂಸ್ಥೆ ಹಾಗೂ ಮನೆ ಮೇಲೆ ಐಟಿ ದಾಳಿಯಾಗಿದೆ.
ಸಿದ್ಧಾರ್ಥ ಕಾಲೇಜಿನಲ್ಲಿ 10 ಅಧಿಕಾರಿಗಳ ತಂಡ ದಾಳಿ ನಡೆಸಿ ಬೆಳಗ್ಗೆಯಿಂದಲೂ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರದ ಟಮಕ ಬಳಿಯ ಜಾಲಪ್ಪ ಕಾಲೇಜು ಮೇಲೂ ದಾಳಿಯಾಗಿದೆ. ಆರ್ ಎಲ್ ಜಾಲಪ್ಪ ಮಾಜಿ ಸಂಸದ. ಬೆಳ್ಳಂ ಬೆಳಗ್ಗೆ ಇಬ್ಬರು ನಾಯಕರ ಒಡೆತನದ ವಿದ್ಯಾಸಂಸ್ಥೆಗಳ ಮೇಲೆ ಐಟಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.