ರಶ್ಮಿಕಾ ಮಂದಣ್ಣನಿಗೆ ಐಟಿ ಶಾಕ್

ರಶ್ಮಿಕಾ ಮಂದಣ್ಣನಿಗೆ ಐಟಿ ಶಾಕ್

ಕೊಡಗು, ಜ. 16: ನಟಿ ರಶ್ಮಿಕಾ ಮಂದಣ್ಣ ಅವರ ಮನೆಯ ಮೇಲೆ ಇಂದು ಬೆಳ್ಳಂ ಬೆಳಿಗ್ಗೆಯೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳ ಜೊತೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ನಡುವೆ ದಾಳಿಯಲ್ಲಿ ಭಾಗವಹಿಸಿರುವ ಅಧಿಕಾರಿಗಳು ನಟಿ ರಶ್ಮಿಕ ಮಂದಣ್ಣನವರಿಗೆ ಕೂಡಲೇ ಕೊಡಗಿನ ವಿರಾಜಪೇಟೆಯಲ್ಲಿರುವ ತಮ್ಮ ಮನೆಗೆ ಬಂದು ತುರ್ತು ವಿಚಾರಣೆಗೆ ಹಾಜರು ಇರುವಂತೆ ಸಮನ್ಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ

ಸುಮಾರು 10ಕ್ಕೂ ಹೆಚ್ಚು ಐಟಿ, ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ನಟಿ ರಶ್ಮಿಕಾ ಮಂದಣ್ಣ ಅವರು ಆದಾಯ ತೆರಿಗೆ ಪಾವತಿಸದೇ ಇರುವುದು ಸೇರಿದಂತೆ, ವಿವಿಧ ಹಿನ್ನಲೆಯಲ್ಲಿ ಅವರ ಮನೆಯಲ್ಲಿನ ದಾಖಲೆಗಳನ್ನು ಪರಿಶೀಲನೆಯಲ್ಲಿ ನಿರತರಾಗಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

ಕನ್ನಡದಲ್ಲಿ ಬೆರಳೆಣೆಗೆ ಸಿನಿಮಾದಲ್ಲಿ ಅಭಿನಯಿಸಿರುವ ರಶ್ಮಿಕಾ ಮಂದಣ್ಣ ಅವರು ತೆಲುಗು ಸಿನಿಮಾ ರಂಗದಲ್ಲಿ ಹೆಚ್ಚು ಅವಕಾಶಗಳನ್ನು ಪಡೆದುಕೊಂಡಿದ್ದು, ಅವರ ಸಂಭಾವನೆ ಕೂಡ ಹೆಚ್ಚಿದೆ ಎನ್ನಲಾಗುತ್ತಿದ್ದು, ತಮಗೆ ಸಿಕ್ಕ ಸಂಭಾವನೆಯನ್ನು ರಶ್ಮಿಕಾ ಮಂದಣ್ಣ ಅವರು ಎಲ್ಲಿ ಹೂಡಿಕೆ ಮಾಡಿದ್ದಾರೆ. ತಮ್ಮ ಆಸ್ತಿ ಸೇರಿದಂತೆ ಇತರ ಮಾಹಿತಿಯನ್ನು ಅಧಿಕಾರಿಗಳು ರಶ್ಮಿಕಾ ಮಂದಣ್ಣ ಅವರ ತಾಯಿಯನ್ನು ಪ್ರಶ್ನೆ ಮಾಡುತ್ತಿದ್ದಾರೆ ಎನ್ನಲಾಗಿದೆ. ರಶ್ಮಿಕಾ ಮಂದಣ್ಣ ಅವರು ಹೆಚ್ಚು ಬೆಂಗಳೂರು ಹಾಗೂ ಹೈದ್ರಾಬಾದ್ನಲ್ಲಿ ಉಳಿದುಕೊಳ್ಳುತ್ತಾರೆ. ಅವರು ಕೊಡಗಿಗೆ ಬರುವುದು ಕಡಿಮೆ ಎನ್ನಲಾಗುತ್ತಿದ್ದು ಬೆಂಗಳೂರಿನಲ್ಲೂ ಕೂಡ ಐಟಿ ದಾಳಿ ನಡೆಸಲಾಗುವುದು ಎನ್ನಲಾಗುತ್ತಿದೆ.

 

ಫ್ರೆಶ್ ನ್ಯೂಸ್

Latest Posts

Featured Videos