ಮತ್ತೆ ಶುರುವಾಗಲಿದೆ ಮಳೆಯ ಆರ್ಭಟ

ಮತ್ತೆ ಶುರುವಾಗಲಿದೆ ಮಳೆಯ ಆರ್ಭಟ

ಬೆಂಗಳೂರು: ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ಆರ್ಭಟಿಸುತ್ತಿದ್ದ ಮಳೆ ಕಡಿಮೆಯಾಗಿದ್ದು, ಅಕ್ಟೋಬರ್ ೨೯ರ ನಂತರ ಮತ್ತೊಂದು ಸುತ್ತಿನ ಮಳೆಯಾಗುವ ಸಾಧ್ಯತೆಗಳಿವೆ. ಈ ನಡುವೆ ನೈರುತ್ಯ ಮುಂಗಾರು ಅವಧಿ ಮುಗಿಯುತ್ತಿದ್ದು, ನಾಳೆ ಈಶಾನ್ಯ ಹಿಂಗಾರು ಆರಂಭವಾಗುವ ಮುನ್ಸೂಚನೆಗಳಿವೆ.
ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತಕ್ಕೆ ಪೂರಕವಾದ ವಾತಾವರಣ ಉಂಟಾಗಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದರು.
ಅಲ್ಲದೆ ಅರಬ್ಬಿಸಮುದ್ರದಲ್ಲಿ ಮೇಲ್ಮನೆ ಸುಳಿಗಾಳಿ ಉಂಟಾಗಿರುವುದರಿಂದ ಮತ್ತೊಂದು ಸುತ್ತಿನ ಮಳೆಯಾಗುವ ಸಾಧ್ಯತೆಗಳಿವೆ. ಅಕ್ಟೋಬರ್ ತಿಂಗಳಿನಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ನಾಳೆಯಿಂದ ಈಶಾನ್ಯ ಹಿಂಗಾರು ಆರಂಭವಾಗುವ ಮುನ್ಸೂಚನೆಗಳಿವೆ.

ಫ್ರೆಶ್ ನ್ಯೂಸ್

Latest Posts

Featured Videos