ಐಟಿಐ ಲಿಮಿಟೆಡ್ ನೇಮಕಾತಿ

ಐಟಿಐ ಲಿಮಿಟೆಡ್ ನೇಮಕಾತಿ

ಬೆಂಗಳೂರು, ಏ. 25, ನ್ಯೂಸ್ ಎಕ್ಸ್ ಪ್ರೆಸ್: ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿ ಅಡ್ವೈಸರ್ / ಸೀನಿಯರ್ ಕನ್ಸಲ್ಟೆಂಟ್ಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ ಸೈಟ್‌ ನಲ್ಲಿ ಪ್ರಕಟಣೆ ಹೊರಡಿಸಿದೆ.

ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್ ಸೈಟ್ ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 10,2019 ರೊಳಗೆ ಕಳುಹಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಈ ಹುದ್ದೆಗಳಿಗೆ ಕನಿಷ್ಟ ಪದವಿ ವಿದ್ಯಾರ್ಹತೆ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು.

ವಯೋಮಿತಿ: ಮೇ 10,2019ರ ಅನ್ವಯ ಗರಿಷ್ಟ 64 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್ ಸೈಟ್ ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಕಳುಹಿಸಬಹುದು. ಕಚೇರಿಯ ವಿಳಾಸ: ಜನರಲ್ ಮ್ಯಾನೇಜರ್, ಐಟಿಐ ಲಿಮಿಟೆಡ್,ರಿಜಿಸ್ಟರ್ಡ್ ಮತ್ತು ಕಾರ್ಪೋರೇಟ್ ಆಫೀಸ್, ಐಟಿಐ ಭವನ್,ದೂರವಾಣಿ ನಗರ,ಬೆಂಗಳೂರು -560016

ಫ್ರೆಶ್ ನ್ಯೂಸ್

Latest Posts

Featured Videos