ಬೆಂಗಳೂರು, ಜ. 14 : ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಜ.23 ರಂದು ಅರಮನೆ ಮೈದಾನದಲ್ಲಿ ಸಂಸದರು, ಶಾಸಕರು,ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸೇರಿದಂತೆ ಎಲ್ಲಾ ಮುಖಂಡರ ಸಮಾವೇಶವನ್ನು ನಡೆಸಲಾಗುವುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ತಿಳಿಸಿದರು.
ಜೆ.ಪಿ.ಭವನದಲ್ಲಿಂದು ನಡೆದ ಬೆಂಗಳೂರು ಮಹಾನಗರ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋತವರು, ಗೆದ್ದವರು, ಸಂಸದರು, ಶಾಸಕರು, ನಗರಸಭೆ, ಪುರಸಭೆ ಸದಸ್ಯರು, ತಾಲೂಕು ಮಟ್ಟದ ಮುಖಂಡರು, ಜಿ.ಪಂ., ತಾ.ಪಂ. ಅಧ್ಯಕ್ಷರು ಸದಸ್ಯರನ್ನೊಳಗೊಂಡ ಪಕ್ಷದ ಮುಖಂಡರ ಸಮಾವೇಶ ನಡೆಸಲಾಗುವುದು.
ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವ ಬಗ್ಗೆ ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದರು.