ಸ್ಟಾರ್‌ ಆಟಗಾರರ ದಾಖಲೆಯನ್ನು ಸರಿಗಟ್ಟಿದ ಜಡೇಜಾ!

ಸ್ಟಾರ್‌ ಆಟಗಾರರ ದಾಖಲೆಯನ್ನು ಸರಿಗಟ್ಟಿದ ಜಡೇಜಾ!

ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಟೆಸ್ಟ್‌ ಪಂದ್ಯಗಳಲ್ಲಿ ಈಗಾಗಲೇ 3 ಪಂದ್ಯಗಳಲ್ಲಿ 2-1 ಅಂಕಗಳನ್ನು ಪಡೆದು ಭಾರತ ಸರಣಿಯಲ್ಲಿ ಮೇಲುಗೈ ಸಾಧಿಸಿದೆ. ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 434 ರನ್‌ಗಳ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ಸರಣಿಯಲ್ಲಿ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆಲ್‌ರೌಂಡ್ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರವೀಂದ್ರ ಜಡೇಜಾ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಇದರಲ್ಲಿ 9 ಬಾರಿ ಭಾರತದ ನೆಲದಲ್ಲೇ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಲ್ಲಿಯವರೆಗೆ, ಜಡೇಜಾ ಭಾರತದಲ್ಲಿ ಆಡಿರುವ 42 ಟೆಸ್ಟ್ ಪಂದ್ಯಗಳಲ್ಲಿ 206 ವಿಕೆಟ್‌ಗಳನ್ನು ಕಬಳಿಸಿದ್ದು, 9 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಇನ್ನು ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ ಆಟಗಾರರ ಪಟ್ಟಿಯಲ್ಲಿ ಪ್ರಸ್ತುತ ರವೀಂದ್ರ ಜಡೇಜಾ, ಅನಿಲ್ ಕುಂಬ್ಳೆ ಅವರೊಂದಿಗೆ ಜಂಟಿ ಮೊದಲ ಸ್ಥಾನದಲ್ಲಿದ್ದಾರೆ. ಕನ್ನಡಿಗ ಕುಂಬ್ಳೆ ಭಾರತದಲ್ಲಿ ಆಡಿರುವ 63 ಟೆಸ್ಟ್‌ಗಳಲ್ಲಿ 9 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ಹೆಸರು ಕೂಡ ಸೇರಿದೆ. ಇಬ್ಬರೂ ಶ್ರೇಷ್ಠ ಆಟಗಾರರು ಭಾರತದಲ್ಲಿ ಟೆಸ್ಟ್‌ಗಳಲ್ಲಿ ಎಂಟು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos