ಜಡೇಜಾ ಅವರ ಅದ್ಭುತ ಫೀಲ್ಡಿಂಗ್ ಗೆ ಭಾರಿ ಮೆಚ್ಚುಗೆ

ಜಡೇಜಾ ಅವರ ಅದ್ಭುತ ಫೀಲ್ಡಿಂಗ್ ಗೆ ಭಾರಿ ಮೆಚ್ಚುಗೆ

ಬೆಂಗಳೂರು: ನಿನ್ನೆ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ  34ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿತ್ತು.

ನಾಯಕ ಕೆ ಎಲ್ ರಾಹುಲ್ ಹಾಗೂ ಕ್ವಿಂಟನ್ ಡಿ ಕಾಕ್ ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಎದುರು ಲಖನೌ ಸೂಪರ್ ಜೈಂಟ್ಸ್ ತಂಡವು 08 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸತತ ಎರಡು ಸೋಲುಗಳ ಬಳಿಕ ಲಖನೌ ತಂಡವು ಗೆಲುವಿನ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿದೆ.

ಟಾಸ್ ಗೆದ್ದ ಕೆಎಲ್ ರಾಹುಲ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಪರ ರವೀಂದ್ರ ಜಡೇಜಾ 40 ಎಸೆತಗಳಲ್ಲಿ ಅಜೇಯ 57 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ ಧೋನಿ 9 ಎಸೆತಗಳಲ್ಲಿ ಧೋನಿ 28 ರನ್ ಸಿಡಿಸಿದರು. ಈ ಮೂಲಕ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು.

177 ರನ್​ಗಳ ಗುರಿ ಪಡೆದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಉತ್ತಮ ಆರಂಭ ಒದಗಿಸಿದರು. 53 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 82 ರನ್ ಬಾರಿಸಿದ್ದ ಕೆಎಲ್ ರಾಹುಲ್ ಅವರನ್ನು ಕೊನೆಗೂ ಪೆವಿಲಿಯನ್​ಗೆ ಕಳುಹಿಸುವಲ್ಲಿ ಜಡೇಜಾ ಯಶಸ್ವಿಯಾದರು. ಮಥೀಶ ಪತಿರಾಣ ಎಸೆದ 18ನೇ ಓವರ್​ನ ಮೊದಲ ಎಸೆತದಲ್ಲಿ ರಾಹುಲ್ ಪಾಯಿಂಟ್​ ಕ್ಷೇತ್ರದ ಮೂಲಕ ಫೋರ್ ಬಾರಿಸಲು ಯತ್ನಿಸಿದರು. ಗಾಳಿಯಲ್ಲಿ ಚಿಮ್ಮಿದ ಚೆಂಡನ್ನು ಕ್ಷಣಾರ್ಧದಲ್ಲೇ ರವೀಂದ್ರ ಜಡೇಜಾ ಒಂದೇ ಕೈಯಲ್ಲಿ ಹಿಡಿಯುವ ಮೂಲಕ ಎಲ್ಲರನ್ನು ನಿಬ್ಬೆರಗಾಗಿಸಿದರು.

ಇದೀಗ ರವೀಂದ್ರ ಜಡೇಜಾ ಅವರ ಅದ್ಭುತ ಫೀಲ್ಡಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಈ ಕ್ಯಾಚ್​ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos