ವೀರಶೈವ ಮಹಾ ಅಧಿವೇಶನಕ್ಕೆ ಆಹ್ವಾನವಿದೆ ಎಂದ ಜಗದೀಶ್‌ ಶೆಟ್ಟರ್‌!

ವೀರಶೈವ ಮಹಾ ಅಧಿವೇಶನಕ್ಕೆ ಆಹ್ವಾನವಿದೆ ಎಂದ ಜಗದೀಶ್‌ ಶೆಟ್ಟರ್‌!

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ 24ನೇ ಮಹಾದಿವೇಶನ ಸಮಾರಂಭವನ್ನು ಡಿಸೆಂಬರ್ 23 ಮತ್ತು 24ರಂದು ದಾವಣಗೆರೆಯ ಎಂಬಿಎ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾ ಬೆಂಗಳೂರು ಜಿಲ್ಲಾಧ್ಯಕ್ಷ ಎಸ್ ಗುರುಸ್ವಾಮಿ ತಿಳಿಸಿದ್ದಾರೆ. ನಿನ್ನೆ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು ಮಹಾ ಸಭಾಧ್ಯಕ್ಷ ಶಾಮನವರು ಶಿವಶಂಕರಪ್ಪ ಈ ಮಹಾದಿವೇಶನದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ, ಸಮುದಾಯದ ಶಾಸಕರು ಸಂಸದರು ಸಾಹಿತಿಗಳು ಸೇರಿದ ಅನೇಕ ಕಣ್ಣೀರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ ಅಧಿವೇಶದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವಿಚಾರ ಗೊಷ್ಟಿಗಳನ್ನು ಹಮ್ಮಿಕೊಳ್ಳಲಾಗಿದ್ದು ಸ್ಮಾರಣ ಸಂಖ್ಯೆಯನ್ನು ಬಿಡುಗಡೆ ಮಾಡಲಾಗುತ್ತದೆ.

ದಾವಣಗೆರೆಯಲ್ಲಿ ಡಿ. 24ರಂದು ನಡೆಯಲಿರುವ ವೀರಶೈವ ಮಹಾಸಭಾದ ಮಹಾ ಅಧಿವೇಶನಕ್ಕೆ ನನಗೂ ಆಹ್ವಾನ ಬಂದಿದೆ. ನಾನು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವೆ. ಬರೀ ಜಾತಿ ಗಣತಿ ದೃಷ್ಟಿಯಿಂದ ಈ ಸಮಾವೇಶ ನಡೆಯುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ್‌ ಶೆಟ್ಟರ್‌ ತಿಳಿಸಿದರು.

ನಿನ್ನೆ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 3-4 ವರ್ಷಗಳಿಗೊಮ್ಮೆ ವೀರಶೈವ ಮಹಾಸಭಾ ಮಹಾ ಅಧಿವೇಶನ ನಡೆಸಲಾಗುತ್ತದೆ. ಬರೀ ಜಾತಿ ಜನಗಣತಿ ದೃಷ್ಟಿಯಿಂದ ಈ ಸಮಾವೇಶ ಆಯೋಜಿಸಿಲ್ಲ. 2-3 ಪ್ರಮುಖ ವಿಚಾರಗಳ ಕುರಿತು ಸಭೆ ನಡೆಯುತ್ತಿದೆ. ಅದರಲ್ಲಿ ಜಾತಿಗಣತಿ ಸಹ ಒಂದು. ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಮತ್ತು ಎಲ್ಲ ಒಳಪಂಗಡಗಳನ್ನು ಸೇರಿಸುವುದು ಪ್ರಮುಖ ಬೇಡಿಕೆಯಾಗಿದೆ. ಸಮಾಜ ಜಾಗೃತಿ ಮತ್ತು ಸಂಘಟನೆ ಮಾಡಲು ಏನು ಮಾಡಬೇಕೆಂಬುದರ ಬಗ್ಗೆ ಚರ್ಚಿಸಲಾಗುತ್ತಿದೆ ಎಂದರು.

 

 

ಫ್ರೆಶ್ ನ್ಯೂಸ್

Latest Posts

Featured Videos