ಜೈಸ್ವಾಲ್ ಅಬ್ಬರಕ್ಕೆ ಹೊಸ ದಾಖಲೆ

ಜೈಸ್ವಾಲ್ ಅಬ್ಬರಕ್ಕೆ ಹೊಸ ದಾಖಲೆ

ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್‌ ವಿರುದ್ದ 5 ಟೆಸ್ಟ್‌ ಪಂದ್ಯಗಳಲ್ಲಿ ಈಗಾಗಲೇ 3 ಟೆಸ್ಟ್‌ ಪಂದ್ಯಗಳು ಮುಕ್ತಾಯವಾಗಿದ್ದು. ಇಂಗ್ಲೆಂಡ್‌ ವಿರುದ್ದ 4ನೇ ಟೆಸ್ಟ್‌ ಪಂದ್ಯ ಅರಂಭವಾಗಿದೆ.

ರಾಂಚಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ ಹೊಸ ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಯಾವುದೇ ಎಡಗೈ ಬ್ಯಾಟರ್​ಗೆ ಸಾಧ್ಯವಾಗದ ವಿಶೇಷ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ.

ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 117 ಎಸೆತಗಳನ್ನು ಎದುರಿಸಿ 1 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 73 ರನ್ ಬಾರಿಸಿದರು. ಈ ರನ್​ಗಳೊಂದಿಗೆ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 600+ ರನ್ ಕಲೆಹಾಕಿದ ಭಾರತದ ಮೂರನೇ ಬ್ಯಾಟರ್ ಎನಿಸಿಕೊಂಡರು.

ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ್ದು ವಿರಾಟ್ ಕೊಹ್ಲಿ ಮತ್ತು ರಾಹುಲ್ ದ್ರಾವಿಡ್ ಮಾತ್ರ. 2002 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರಾಹುಲ್ ದ್ರಾವಿಡ್ 6 ಇನಿಂಗ್ಸ್​ಗಳಲ್ಲಿ 602 ರನ್ ಬಾರಿಸಿ ದಾಖಲೆ ಬರೆದಿದ್ದರು.

ಇದಾದ ಬಳಿಕ 2017 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಈ ದಾಖಲೆ ಮುರಿದಿದ್ದರು. ಕಿಂಗ್ ಕೊಹ್ಲಿ 8 ಇನಿಂಗ್ಸ್​ಗಳ ಮೂಲಕ 655 ರನ್ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದರು.

ಇದೀಗ ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ 7 ಇನಿಂಗ್ಸ್​ಗಳ ಮೂಲಕ 600+ ರನ್ ಕಲೆಹಾಕಿ ಯಶಸ್ವಿ ಜೈಸ್ವಾಲ್ ಈ ಸಾಧನೆ ಮಾಡಿ ಮೂರನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos