ದಾಖಲೆಗಳ ಸರದಾರನನ್ನೇ ಸರಿಗಟ್ಟಿದ ಜೈಸ್ವಾಲ್

ದಾಖಲೆಗಳ ಸರದಾರನನ್ನೇ ಸರಿಗಟ್ಟಿದ ಜೈಸ್ವಾಲ್

ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಟೆಸ್ಟ್ ಪಂದ್ಯಗಳಲ್ಲಿ ಈಗಾಗಲೇ ಮೂರು ಟೆಸ್ಟ್ ಪಂದ್ಯಗಳ ನಡೆದಿದ್ದು ಈ ಟೆಸ್ಟ್‌ ಪಂದ್ಯಗಳಲ್ಲಿ ಭಾರತ 2-1 ಅಂಕದಿಂದ ಮುನ್ನಡೆ ಸಾಧಿಸಿದೆ.

ರಾಂಚಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಒಟ್ಟು 110 ರನ್ ಬಾರಿಸಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ 73 ರನ್​ ಸಿಡಿಸಿದ್ದ ಜೈಸ್ವಾಲ್, ದ್ವಿತೀಯ ಇನಿಂಗ್ಸ್​ನಲ್ಲಿ 37 ರನ್​ಗಳಿಸಿ ಔಟಾದರು. ಈ ರನ್​ಗಳೊಂದಿಗೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಸರಿಗಟ್ಟಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 8 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಯಶಸ್ವಿ ಜೈಸ್ವಾಲ್ ಒಟ್ಟು 655 ರನ್ ಕಲೆಹಾಕಿದ್ದಾರೆ. ಈ ಮೂಲಕ 7 ವರ್ಷಗಳ ಹಿಂದೆ ವಿರಾಟ್ ಕೊಹ್ಲಿ ನಿರ್ಮಿಸಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟುವಲ್ಲಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯ ಮಾರ್ಚ್ 7 ರಿಂದ ಶುರುವಾಗಲಿದೆ. ಈ ಪಂದ್ಯದಲ್ಲಿ 1 ರನ್​ ಕಲೆಹಾಕಿದರೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯೊಂದರಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ 22 ವರ್ಷದ ಯಶಸ್ವಿ ಜೈಸ್ವಾಲ್ ಪಾಲಾಗಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos