ದಾಖಲೆಗಳ ಸರದಾರನ್ನೇ ಸರಿಗಟ್ಟಿದ ಯಶಸ್ವಿ

ದಾಖಲೆಗಳ ಸರದಾರನ್ನೇ ಸರಿಗಟ್ಟಿದ ಯಶಸ್ವಿ

ಬೆಂಗಳೂರು: ಇಂಗ್ಲೆಂಡ್‌ ವಿರುದ್ದ ಭಾರತ ನಡುವಿನ 5 ಟೆಸ್ಟ್‌ ಪಂದ್ಯಗಳಲ್ಲಿ ಈಗಾಗಲೇ  3 ಪಂದ್ಯಗಳು ಮುಗಿದಿದ್ದು. ಈ ಟೆಸ್ಟ್‌ ಪಂದ್ಯದಲ್ಲಿ ಹೊಸಬ್ಬರೀಗೆ ಹೆಚ್ಚು ಅವಕಾಶ ನೀಡಿದ್ದು. ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 3ನೇ ಟೆಸ್ಟ್​ನಲ್ಲಿ ಯಶಸ್ವಿ ಡಬಲ್ ಸೆಂಚುರಿ ಸಿಡಿಸುವ ಮೂಲಕ

ಅಪರೂಪದ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಬಹು ಅಪರೂಪದ ರೆಕಾರ್ಡ್​ ಅನ್ನು ಸರಿಗಟ್ಟುವ ಮೂಲಕ ಎಂಬುದೇ ವಿಶೇಷ.

ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಯಶಸ್ವಿ ಜೈಸ್ವಾಲ್ 236 ಎಸೆತಗಳಲ್ಲಿ 12 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ ಅಜೇಯ 214 ರನ್​ ಬಾರಿಸಿದರು. ಇದರೊಂದಿಗೆ ಟೆಸ್ಟ್ ಸರಣಿಯೊಂದರಲ್ಲಿ ಟೀಮ್ ಇಂಡಿಯಾ ಪರ ಬ್ಯಾಕ್ ಟು ಬ್ಯಾಕ್ ಡಬಲ್ ಸೆಂಚುರಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು. ಈ ಮೂಲಕ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದರು.

ಕಿಂಗ್ ಕೊಹ್ಲಿ 2017 ರಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಡಬಲ್ ಸೆಂಚುರಿ ಬಾರಿಸಿ ಈ ಡಬಲ್ ಟನ್​ಗಳ ವಿಶೇಷ ದಾಖಲೆ ಬರೆದಿದ್ದರು. ಇದೀಗ ಏಳು ವರ್ಷಗಳ ಬಳಿಕ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

3ನೇ ಟೆಸ್ಟ್​ ಪಂದ್ಯದಲ್ಲಿ 214 ರನ್​ ಬಾರಿಸುವ ಮೂಲಕ ಒಂದೇ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಡಬಲ್ ಸೆಂಚುರಿ ಸಿಡಿಸಿದ ವಿರಾಟ್ ಕೊಹ್ಲಿಯ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ. ಅದರಲ್ಲೂ ಈ ಸಾಧನೆ ಮಾಡಿದ ಮೊದಲ ಎಡಗೈ ದಾಂಡಿಗ ಎಂಬ ಹೆಗ್ಗಳಿಕೆಗೂ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos