ಕಾಂಗ್ರೆಸ್ ನಿಂದ ಟಿಕೆಟ್ ಕೊಟ್ಟರೆ ಲೋಕಸಭೆಗೆ ಸ್ಪರ್ಧೆ: ಜನಾರ್ದನ ಪೂಜಾರಿ

ಕಾಂಗ್ರೆಸ್ ನಿಂದ ಟಿಕೆಟ್ ಕೊಟ್ಟರೆ ಲೋಕಸಭೆಗೆ ಸ್ಪರ್ಧೆ: ಜನಾರ್ದನ ಪೂಜಾರಿ

ಮಂಗಳೂರು, ಮಾ.14, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ನಾನು ಚುನಾವಣೆಗೆ ಸ್ಪರ್ಧಿಸಲು ಸಿದ್ದ ಎಂದು ಕೇಂದ್ರ ದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ನಾನೂ ಆಕಾಂಕ್ಷಿಯಾಗಿದ್ದೇನೆ. ಟಿಕೆಟ್ ಸಿಕ್ಕರೆ ಖಂಡಿತವಾಗಿಯೂ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಎರಡು ದಿನದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಟಿಕೆಟ್ ಕೇಳುತ್ತೇನೆ. ಭ್ರಷ್ಟಾಚಾರ ನಿರ್ಮೂಲನೆ ಪ್ರಧಾನಿ ಮೋದಿಯಿಂದ ಸಾಧ್ಯ, ಮೋದಿ ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು. ಪ್ರಧಾನಿ ಮೋದಿ ಭ್ರಷ್ಟಾಚಾರದ ವಿರುದ್ಧ ಹೋರಾಡಿ ಗೆದ್ದಿದ್ದಾರೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos