ಸಿಎಂ, ಡಿಸಿಎಂ ಭೇಟಿಯಾದ ಜನಾರ್ದನ ರೆಡ್ಡಿ

ಸಿಎಂ, ಡಿಸಿಎಂ ಭೇಟಿಯಾದ ಜನಾರ್ದನ ರೆಡ್ಡಿ

ಬೆಂಗಳೂರು: ರಾಜ್ಯಸಭಾ ಚುನಾವಣೆಯ ಮತದಾನ ನಾಳೆ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ನಡುವೆ ಗಂಗಾವತಿ ಕ್ಷೇತ್ರದ ಪಕ್ಷೇತರ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ನಿವಾಸ ಕಾವೇರಿಯಲ್ಲಿ ಸಿಎಂ ಮತ್ತು ಡಿಸಿಎಂ ಅವರನ್ನು ಭೇಟಿ ಮಾಡಿ, ಕೆಲ ಹೊತ್ತು ಸಮಾಲೋಚನೆ ನಡೆಸಿದರು.

ಮಾಜಿ ಸಚಿವರಾದ ಶಾಸಕ ಜನಾರ್ಧನರೆಡ್ಡಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos