ಜನಸ್ಪಂದನಾ: ಕೂಡಲೇ ಅರ್ಜಿಗಳ ವಿಲೇವಾರಿಗೆ ಸಿಎಂ ಸೂಚನೆ!

ಜನಸ್ಪಂದನಾ: ಕೂಡಲೇ ಅರ್ಜಿಗಳ ವಿಲೇವಾರಿಗೆ ಸಿಎಂ ಸೂಚನೆ!

ಬೆಂಗಳೂರು: ಮೊದಲ ಜನಸ್ಪಂದನಾ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ತರುವಾಯ ಮತ್ತೊಮ್ಮೆ ಜನರ ಬಳಿಗೆ ಸರ್ಕಾರವನ್ನು ತರುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮ್ಮ ನೇತೃತ್ವದಲ್ಲಿ ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯ ಮಟ್ಟದ ಎರಡನೇ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ನಿಮ್ಮ ಅಹವಾಲುಗಳೊಂದಿಗೆ ಬನ್ನಿ, ನಾವು ಅವುಗಳನ್ನು ಆಲಿಸಿ, ಪರಿಹರಿಸುತ್ತೇವೆ ಎಂದು ಹೇಳಿದರು.

ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ರಾಜ್ಯಮಟ್ಟದ ಜನತಾ ದರ್ಶನದ ಎರಡನೇ ಕಾರ್ಯಕ್ರಮವನ್ನು ನೆನ್ನೆ ಹಮ್ಮಿಕೊಂಡಿದ್ದರು ಸಾರ್ವಜನಿಕರಿಂದ ಬರುವ ಅಹವಾಲುಗಳು, ದೂರುಗಳು ಹಾಗೂ ಮನವಿ ಅರ್ಜಿಗಳನ್ನು ಸ್ಥಳದಲ್ಲೇ ಪರಿಹರಿಸುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆನ್ಲೈನ್ ವಿಡಿಯೋ ಸಮವಾದದ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಮುಖ್ಯಮಂತ್ರಿಗಳ ಜನತಾ ದರ್ಶನಕ್ಕೆ ಸಾತ್ ನೀಡಿ ಜನರ ಅಹವಾಲು ವಿಲೇವಾರಿ ಪ್ರಕ್ರಿಯೆ ಕೆಲಸವನ್ನು ಮಾಡಿದರು. ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು ಜನತಾ ದರ್ಶನದಲ್ಲಿ ಸುಮಾರು 20 ಸಾವಿರ ಜನರು ಭಾಗವಹಿಸಿದ್ದು ತಮ್ಮ ಅಹವಾಲುಗಳು ನೀಡಿದ್ದಾರೆ. ಸುಮಾರು 11 ಸಾವಿರ ಅರ್ಜಿಗಳನ್ನು ಸ್ವೀಕೃತವಾಗಿ ಇದರಲ್ಲಿ ಹೆಚ್ಚಾಗಿ ಕಂದಾಯ ಇಲಾಖೆಗೆ ಸೇರಿದ ಅರ್ಜಿಗಳಾಗಿವೆ.

ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಪಡಿಸಿ ಆದೇಶಗಳನ್ನು ನೀಡಿದ್ದೇವೆ, ಜಿಲ್ಲೆಗಳಿಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಕಾರ್ಯದರ್ಶಿಗಳಿಗೆ ಕಳುಹಿಸಿಕೊಳ್ಳಲಾಗಿದೆ, ಕೂಡಲೇ ಜನರ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು ತ್ವರಿತವಾಗಿ ಇತ್ಯರ್ಥ ಪಡಿಸಬಹುದಾದ ಅರ್ಜಿಗಳನ್ನು ಕೂಡಲೇ ಇತ್ಯರ್ಥ ಪಡಿಸಬೇಕು ಹಾಗೂ ಕಾನೂನಿಗೆ ವಿರುದ್ಧವಾದ ಅರ್ಜಿಗಳಿಗೆ ಸೂಕ್ತ ಹಿಂಬರಹ ನೀಡಬೇಕು ಎಂದು ಸೂಚನೆ ನೀಡಿದರು.

ಕಂದಾಯ ಪೊಲೀಸ್ ಹಾಗೂ ಇತರೆ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಕೆಲ ಹಂತದಲ್ಲಿಯೇ ಬಗೆಹರಿಸಿದರೆ ಜನರು ಬೆಂಗಳೂರಿಗೆ ಬಂದು ಇಷ್ಟೊಂದು ಅರ್ಜಿಗಳನ್ನು ನೀಡುವ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ, ಈ ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು.

ವಿಶೇಷವಾಗಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಅಂದಾಗ ಮಾತ್ರ ಅಜ್ಜಿಗಳ ಸಂಖ್ಯೆ ಕಡಿಮೆಯಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು ತಮ್ಮ ತಮ್ಮ ಹಂತದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಕಾಳಜಿ ವಹಿಸಬೇಕು.

ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ ತೋರಿದರೆ ಜನರಿಗೆ ಅ ಗೌರವ ತೋರಿಸಿದರೆ, ಅಂತಹ ಅಧಿಕಾರಿಗಳ ಮೇಲೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.

ಒಂದು ತಿಂಗಳೊಳಗೆ ಅರ್ಜಿಗಳ ವಿಲೇವಾರಿ ಮಾಡುವಂತಹ ಕೆಲಸ ಆಗಬೇಕು ಈ ಹಿನ್ನಲೆಯಲ್ಲಿ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಅರ್ಜಿದಾರರು ಯಾವುದೇ ಚಿಂತೆ ಸಂಶಯ ಪಡೆಯುವ ಅಗತ್ಯವಿಲ್ಲ ಪರಿಹಾರ ಸಿಗಲಿದೆ ಎಂದು ಅವರು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos