ಮತ್ತೆ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ ಜಯಪ್ರಕಾ‍ಶ್ ಹೆಗಡೆ!

ಮತ್ತೆ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ ಜಯಪ್ರಕಾ‍ಶ್ ಹೆಗಡೆ!

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾ‍ಶ್ ಹೆಗಡೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.

ಕರಾವಳಿಯ ಅಭಿವೃದ್ಧಿಯ ಗುರಿ ಸಾಧನೆಗಾಗಿ ರಾಜಕೀಯದಲ್ಲಿ ಮತ್ತೆ ಸಕ್ರಿಯರಾಗಲು ನಿರ್ಧರಿಸಿದ್ದೇನೆ ಅದರಂತೆ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿ ಮುಂದಿನ ರಾಜಕೀಯ ನಡೆಯನ್ನು ನಿರ್ಧರಿಸಲು ನಿರ್ಣಯಿಸಿದ್ದೇನೆ ಎಂದು ಕೆ ಜಯಪ್ರಕಾಶ್ ಹೆಗ್ಡೆ ಹೇಳಿದರು. ಜಯಪ್ರಕಾಶ್ ಹೆಗಡೆ ಇದೀಗ ಮತ್ತೆ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ

ಜಯಪ್ರಕಾಶ್ ಹೆಗಡೆ ಅವರಿಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ನೀಡಲು ಪಕ್ಷ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿದೆ.

 

ಫ್ರೆಶ್ ನ್ಯೂಸ್

Latest Posts

Featured Videos