ಜೆಡಿಎಸ್, ಬಿಜೆಪಿ ಮಾರಾಮಾರಿ

ಜೆಡಿಎಸ್, ಬಿಜೆಪಿ ಮಾರಾಮಾರಿ

ಹಾಸನ, ಡಿ. 04: ರಾಜ್ಯದಲ್ಲಿ ನಾಳೆ ಉಪಚುನಾವಣೆ ನಡೆಯಲಿದ್ದು, ಎಲ್ಲರ ಚಿತ್ತ ನಾಳೆಯ ಮತದಾನದ ಕಡೆಗೆ ನೆಟ್ಟಿದೆ. ಕೆ.ಆರ್.ಪೇಟೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮಾರಾಮಾರಿ ನಡೆದಿದ್ದು, ಮಾಜಿ ಸಚಿವ ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದ ಸಂತೋಷ್ ಎಂಬುವರ ತೋಟದ ಮನೆಯಿಂದ ಕೆ.ಆರ್.ಪೇಟೆ ಉಪಚುನಾವಣೆಗೆ ಹಣ ಸಾಗಿಸುತ್ತಿದ್ದಾರೆಂದು, ಮಾಜಿ ಸಚಿವ ರೇವಣ್ಣ ಪುತ್ರ ಸೂರಜ್ ರೇವಣ್ಣ ಬೆಂಬಲಿಗರು ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಹೀಗಾಗಿ ಸೂರಜ್ ರೇವಣ್ಣ ವಿರುದ್ಧ ಬಿಜೆಪಿ ಕಾರ್ಯಕರ್ತರು ದೂರು ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮತ್ತು ಕೊಲೆ ಯತ್ನ ಮಾಡಿದ್ದಾರೆ ಎಂದು ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಸೂರಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos