ಯಲಿಯೂರು ಗ್ರಾಮಪಂಚಾಯ್ತಿ ಅಧ್ಯಕ್ಷ ಸ್ಥಾನ ಜೆ.ಡಿ.ಎಸ್‌ ತೆಕ್ಕೆಗೆ

ಯಲಿಯೂರು ಗ್ರಾಮಪಂಚಾಯ್ತಿ ಅಧ್ಯಕ್ಷ ಸ್ಥಾನ ಜೆ.ಡಿ.ಎಸ್‌ ತೆಕ್ಕೆಗೆ

ದೇವನಹಳ್ಳಿ, ನ. 06: ತಾಲೂಕಿನ ಯಲಿಯೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆ.ಡಿ.ಎಸ್ ಬೆಂಬಲಿತ ಅಭ್ಯರ್ಥಿ ಅಶ್ವಿನಿ ಮಂಜುನಾಥ್ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಪ್ರಭಾಕರ್ ಅವಿರೋಧವಾಗಿ ಆಯ್ಕೆ ಗೊಂಡಿದ್ದಾರೆ. ಅಧ್ಯಕ್ಷರಾಗಿದ್ದ ಶ್ವೇತಾ ಕಿಟ್ಟಿ ಮತ್ತು ಉಪಾಧ್ಯಕ್ಷರಾಗಿದ್ದ ತಿಮ್ಮಯ್ಯ ಅವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿ ಆಗಿತ್ತು. ಯಲಿಯೂರು ಗ್ರಾಮ ಪಂಚಾಯ್ತಿಯಲ್ಲಿ ಒಟ್ಟಾರೆ 13 ಸದಸ್ಯರಿದ್ದು, ಜೆ.ಡಿ.ಎಸ್ ಬೆಂಬಲಿತರು 08 ಹಾಗೂ 5 ಸದಸ್ಯರು ಕಾಂಗ್ರೆಸ್ ಬೆಂಬಲಿತರ ಸ್ಥಾನ ಹೊಂದಿದ್ದಾರೆ.

ಚುನಾವಣೆಯಲ್ಲಿ 8 ಮತಗಳನ್ನು ಪಡೆದ ಅಶ್ವಿನಿ ಮಂಜುನಾಥ್ ಆಯ್ಕೆಯಾದರೆ, 5 ಮತಗಳನ್ನು ಪಡೆದ ಕಾಂಗ್ರೆಸ್ ಬೆಂಬಲಿತ ಶೈಲಾ ರಮೇಶ್ ಪರಾಜಿತರಾದರು. ಉಪಾಧ್ಯಕ್ಷರ ಸ್ಥಾನಕ್ಕೆ ಯಾರು ಸಹ ನಾಮ ಪತ್ರವನ್ನು ಸಲ್ಲಿಸ ಕಾರಣ ಪ್ರಭಾಕರ್ ಒಬ್ಬರೇ ನಾಮ ಪತ್ರವನ್ನು ಸಲ್ಲಿಸಿದ್ದರಿಂದ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಕೃಷ್ಣಪ್ಪ ಘೋಷಿಸಿದರು.

ನೂತನ ಅಧ್ಯಕ್ಷೆ ಅಶ್ವಿನಿ ಮಂಜುನಾಥ್ ಮಾತನಾಡಿ, ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು, ನೈರ್ಮಲ್ಯ, ಹಾಗೂ ಬೀದಿ ದೀಪಗಳ ವ್ಯವಸ್ಥೆಗೆ ಹೆಚ್ಚಿನ ಆಧ್ಯತೆ ನೀಡುವುದು ತಾಲೂಕಿನಲ್ಲಿ ಮಾದರಿ ಪಂಚಾಯಿತಿಯನ್ನಾಗಿ ಮಾಡಲಾಗುವುದು. ಪ್ರತಿ ಗ್ರಾಮದಲ್ಲೂ ಸ್ವಚ್ಚತೆಗೆ ಹೆಚ್ಚಿನ ಆಧ್ಯತೆಯನ್ನು ನೀಡಲಾಗುವುದು ಎಂದು ತಿಳಿಸಿದರು.

ಚನ್ನರಾಯಪಟ್ಟಣ ಹೋಬಳಿ ಜೆ.ಡಿ.ಎಸ್ ಅಧ್ಯಕ್ಷ ಮುನಿರಾಜು ಮಾತನಾಡಿ, ಈಗಾಗಲೇ ತಾಲೂಕಿನಲ್ಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೆಚ್ಚಿನ ಅನುದಾನದಿಂದ ಎಲ್ಲಾ ಗ್ರಾಮಗಳ ಮೂಲ ಸೌಕರ್ಯಕ್ಕೆ ಆಧ್ಯತೆ ನೀಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಗ್ರಾಮಗಳ ರಸ್ತೆಗಳು ಹದಗೆಟ್ಟಿರುವುದನ್ನು ಗಮನಿಸಿ ಹಿಂದಿನ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಎಲ್ಲಾ ಗ್ರಾಮಗಳಿಗೂ ಸಿಮೆಂಟ್ ರಸ್ತೆಗಳಿಗೆ ಹೆಚ್ಚು ಆಧ್ಯತೆ ನೀಡಿದ್ದು, ಕುಡಿಯುವ ನೀರಿನ ಸೌಲಭ್ಯಕ್ಕೆ ಕೊಳವೆ ಬಾವಿಗಳು ಕೊರೆಸಲಾಗಿದ್ದು, ಇನ್ನೂ ಹೆಚ್ಚು ಅಭಿವೃದ್ಧಿಗೆ ಆಧ್ಯತೆ ನೀಡಲಾಗುತ್ತಿದೆ ಎಂದರು.

ಅಧ್ಯಕ್ಷ/ಉಪಾಧ್ಯಕ್ಷ ಚುನಾವಣೆಯಲ್ಲಿ ಜೆ.ಡಿ.ಎಸ್ ಬೆಂಬಲಿತ ಸದಸ್ಯರಾದಯಶೋದಮ್ಮ, ಶ್ವೇತಕಿಟ್ಟಿ, ವೈ.ಎಂ.ರಾಮಾಂಜನಪ್ಪ, ಲಕ್ಷ್ಮಿನಾರಾಯಣಗೌಡ, ತಿಮ್ಮರಾಯಪ್ಪ, ಶಿವಪ್ಪ, ಹಾಗೂ ಕಾಂಗ್ರೆಸ್ ಬೆಂಬಲಿತ ಶೈಲಾ ರಮೇಶ್, ಶೋಭ, ರೂಪ, ನೇತ್ರಾವತಿ, ನಾರಾಯಣಸ್ವಾಮಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಜೆ.ಡಿ.ಎಸ್ ನ  ಜೆ.ಡಿ.ಎಸ್ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ, ಪಿಕಾಡ್ ð ಬ್ಯಾಂಕ್‌ನ ನಿರ್ದೇಶಕ ಹನುಮಪ್ಪ, ತಾಲೂಕು ಸೊಸೈಟಿ ನಿರ್ದೇಶಕ ನಾರಾಯಣಸ್ವಾಮಿ, ಮುಖಂಡರುಗಳಾದ ಶಿವಾನಂದ್, ರಾಜ್‌ಕುಮಾರ್, ಸುಬ್ಬಣ್ಣ, ಸೊಣ್ಣೇಗೌಡ, ಮಂಜುನಾಥ್ ಇದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos