ಲೋಕ ಸಮರಕ್ಕೆ ಜೆಡಿಎಸ್‌ ಸಿದ್ಧತೆ

ಲೋಕ ಸಮರಕ್ಕೆ ಜೆಡಿಎಸ್‌ ಸಿದ್ಧತೆ

ಬೆಂಗಳೂರು, ಸೆ.9- ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಜೆಡಿಎಸ್ ನಗರದ ಅರಮನೆ ಮೈದಾನದಲ್ಲಿ ನಾಳೆ ಮಹತ್ವದ ಸಮಾವೇಶ ನಡೆಸಲಿದೆ. ಬಿಜೆಪಿಯೊಂದಿಗೆ ಲೋಕಸಭಾ ಚುನಾವಣಾ ಪೂರ್ವ ಹೊಂದಾಣಿಕೆ ವಿಚಾರವನ್ನು ಪ್ರಕಟಿಸುವ ಸಾಧ್ಯತೆಗಳಿವೆ.
ಈ ಸಭೆಯಲ್ಲಿ ಪಕ್ಷದ ಬಲವರ್ಧನೆ, ಮುಂಬರುವ ಚುನಾವಣೆಗಳ ಸಿದ್ದತೆ, ರಾಜ್ಯ ಸರ್ಕಾರದ ರೈತ ಹಾಗೂ ಜನವಿರೋಧಿ ನಿಲುವುಗಳು ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ಕೈಗೊಳ್ಳಲಿರುವ ಹೋರಾಟದ ರೂಪುರೇಷೆ ಬಗ್ಗೆಯೂ ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ವಿಧಾನಸಭೆ ಚುನಾವಣೆ ಸೋಲಿನಿಂದ ಉತ್ಸಾಹ ಕಳೆದುಕೊಂಡಿರುವ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಹುರಿದುಂಬಿಸುವ ಉದ್ದೇಶದಿಂದ ರಾಜ್ಯಮಟ್ಟದ ಸಮಾವೇಶವನ್ನು ಜೆಡಿಎಸ್ ನಡೆಸಲಿದೆ. ಗ್ರಾಮಪಂಚಾಯ್ತಿಯ ಮಟ್ಟದಿಂದ ಶಾಸಕ ಮತ್ತು ಸಂಸದರವರೆಗೆ ಎಲ್ಲಾ ಹಂತದ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ನಾಳೆ ಬೆಳಿಗ್ಗೆ 10.30ಕ್ಕೆಜೆಡಿಎಸ್ ಸಮಾವೇಶ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಪಕ್ಷದ ಎಲ್ಲಾ ನಾಯಕರು ಭಾಗಹಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos