ಜೆಡಿಎಸ್ ಜೊತೆ ಮೈತ್ರಿ ಮಾಡಲ್ಲ: ಮುನಿಯಪ್ಪ

ಜೆಡಿಎಸ್ ಜೊತೆ ಮೈತ್ರಿ ಮಾಡಲ್ಲ: ಮುನಿಯಪ್ಪ

ಕೋಲಾರ, ಜೂ. 24: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಹೀನಾಯವಾಗಿ ಸೋತಿರುವುದರಿಂದ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಇಲ್ಲ, ನಮ್ಮ ದಾರಿ ನಮಗೆ, ಜೆಡಿಎಸ್ ದಾರಿ ಅವರಿಗೆ ಬಿಟ್ಟಿದ್ದು ಎಂದು ಮಾಜಿ ಸಂಸದ ಮುನಿಯಪ್ಪ ಹೇಳಿದ್ದಾರೆ.

ಇಂದು ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ಜೆಡಿಎಸ್ ಗೆ ಬೆಂಬಲ ಮಾಡಿಲ್ಲ. ನಮ್ಮ ಪರ ಜೆಡಿಎಸ್ ಕೆಲಸ ಮಾಡಿಲ್ಲ. 2 ಕಡೆಯ ನಾಯಕರು ಪೂರ್ತಿ ಪ್ರಮಾಣದಲ್ಲಿ ಕೆಲಸ ಮಾಡಿಲ್ಲ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ 2 ಪಕ್ಷಗಳು ಎಂದೂ ಊಹಿಸದ ರೀತಿ ಸೋಲು ಕಂಡಿವೆ ಎಂದು ಹೇಳಿದರು.

ತ್ರಿಕೋನ ಸ್ಪರ್ಧೆ ಇದ್ದರೆ ಬಿಜೆಪಿ 3ನೇ ಸ್ಥಾನಕ್ಕೆ ಇಳಿಯುತ್ತದೆ. ಮತದಾರರು ಒಂದಾಗದ ಕಾರಣ ಮುಂದಿನ ಚುನಾವಣೆಯಲ್ಲಿ ಮೈತ್ರಿ ಇಲ್ಲ. ಸದ್ಯ ಮೈತ್ರಿ ಸರ್ಕಾರಕ್ಕೆ ಯಾವುದೆ ಸಮಸ್ಯೆಯಿಲ್ಲ. ಸರ್ಕಾರ 5 ವರ್ಷ ಸುಭದ್ರ ಎಂದು ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 

 

ಫ್ರೆಶ್ ನ್ಯೂಸ್

Latest Posts

Featured Videos