ನಮೋ ಭೇಟಿ ಮಾಡಿದ ದಳ ನಾಯಕರು!

ನಮೋ ಭೇಟಿ ಮಾಡಿದ ದಳ ನಾಯಕರು!

ನವದೆಹಲಿ: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ ಹೆಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ ನಿಯೋಗ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತು. ಮುಂಬರುವ ಲೋಕಸಭೆ ಚುನಾವಣೆ ಕುರಿತು ಮೋದಿ ಜೊತೆ ಚರ್ಚೆ ನಡೆಸಲಾಯಿತು. ನವದೆಹಲಿಯ  ಸಂಸತ್ ಭವನದಲ್ಲಿರುವ  ಪ್ರಧಾನಮಂತ್ರಿಗಳ ಕಾರ್ಯಾಲಯದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ಮುಖಂಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos