ಬೆಂಗಳೂರು, ಏ. 24, ನ್ಯೂಸ್ ಎಕ್ಸ್ ಪ್ರೆಸ್: ಶ್ರೀಲಂಕಾದಲ್ಲಿ ಏ. 21ರಂದು ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಹತರಾದ 5 ಜೆಡಿಎಸ್ ಮುಖಂಡರ ಕಳೆಬರವನ್ನು ಇಂದು ಬೆಂಗಳೂರಿನಲ್ಲಿ ದರ್ಶನಕ್ಕೆ ಇಡಲಾಗಿತ್ತು.
ಲಂಕಾದಲ್ಲಿ ಬಾಂಬ್ ಸ್ಫೋಟವಾಗಿ ಜೆಡಿಎಸ್ ಮುಖಂಡರು ನಾಪತ್ತೆ ಆಗಿದ್ದಾರೆ ಎಂಬ ಸುದ್ದಿ ಬಂದಾಗಲೇ ಟ್ವೀಟ್ ಮಾಡಿ ಆತಂಕ, ನೋವನ್ನು ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಜೆಡಿಎಸ್ ಮುಖಂಡರ ಪಾರ್ಥಿವ ಶರೀರದ ಅಂತಿಮದರ್ಶನ ಪಡೆದರು.
ಹಲವು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಮೃತರ ಅಂತಿಮ ದರ್ಶನ ಪಡೆದರ. ಜೆಡಿಎಸ್ ವರಿಷ್ಠ ದೇವೇಗೌಡ ಅವರು ಸಹ ಜೆಡಿಎಸ್ ಮುಖಂಡರ ಅಂತಿಮ ದರ್ಶನ ಪಡೆದರು.