ನವದೆಹಲಿ, ಆ.19 : ಏಮ್ಸ್ ಆಸ್ಪತ್ರೆಯಲ್ಲಿ ಜೀವರಕ್ಷಕ ವ್ಯವಸ್ಥೆಯಲ್ಲಿರುವ ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿ ಇದೆ. 66 ವರ್ಷದ ಜೇಟ್ಲಿ ಅವರ ಆರೋಗ್ಯ ವಿಚಾರಣೆಗಾಗಿ ಗಣ್ಯರ ದಂಡೇ ಹರಿದುಬರುತ್ತಿದೆ. ಆಸ್ಪತ್ರೆ ಸುತ್ತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಚಿವರಾದ ಸ್ಮೃತಿ ಇರಾನಿ, ರಾಮ್ ವಿಲಾಸ್ ಪಾಸ್ವಾನ್, ಜಿತೇಂದ್ರ ಸಿಂಗ್, ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಭೇಟಿ ನೀಡಿದರು. ಹಿಮಾಚಲದ ರಾಜ್ಯಪಾಲ ಕಲರಾಜ್ ಮಿಶ್ರಾ, ಆರ್ಎಸ್ಎಸ್ ನಾಯಕ ಕೃಷ್ಣ ಗೋಪಾಲ್ ಕೂಡ ಮಾಜಿ ಸಚಿವರ ಆರೋಗ್ಯ ಸ್ಥಿತಿ ವಿಚಾರಿಸಿದರು. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಆಗಮಿಸುವ ಹಿನ್ನೆಲೆಯಲ್ಲಿ ಆಸ್ಪತ್ರೆ ಸುತ್ತಮುತ್ತ ಭಾರಿ ಬಂದೋಬಸ್ತ್ ಮಾಡಲಾಗಿದೆ.
.