ಜಿಲ್ಲಾಧಿಕಾರಿ ಆದೇಶ : ಸಕ್ಕರೆ ಕಾರ್ಖಾನೆ ಮುಟ್ಟುಗೋಲು

ಜಿಲ್ಲಾಧಿಕಾರಿ ಆದೇಶ : ಸಕ್ಕರೆ ಕಾರ್ಖಾನೆ ಮುಟ್ಟುಗೋಲು

ಬೆಳಗಾವಿ, ಜೂ. 18: ರೈತರಿಗೆ ಕಬ್ಬಿನ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ 9 ಸಕ್ಕರೆ ಕಾರ್ಖಾನೆಗಳ ಮುಟ್ಟುಗೋಲಿಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದು, ಮುಟ್ಟುಗೋಲು ಹಾಕಲು ತಹಶೀಲ್ದಾರ್ ಗಳಿಗೆ ಸೂಚನೆ ನೀಡಿದ್ದಾರೆ. ಖಾನಾಪುರದ ಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ, ಮುನವಳ್ಳಿಯ ರೇಣುಕಾ ಶುಗರ್ಸ್, ಅಥಣಿ ಶುಗರ್ಸ್, ಕೊಳವಿ ಗೋಕಾಕ್ ಶುಗರ್ಸ್, ಕೃಷ್ಣ ಶುಗರ್ಸ್, ಬೈಲಹೊಂಗಲದ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ, ಬೆಲ್ಲದ ಬಾಗೇವಾಡಿ ವಿಶ್ವರಾಜ ಶುಗರ್ಸ್, ಎಂಕೆ ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ, ಉಗಾರ ಶುಗರ್ಸ್ ಮುಟ್ಟುಗೋಲಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸದ ಕಾರಣ ಬೆಂಗಳೂರಿನಲ್ಲಿ ರೈತರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಈ ಕುರಿತು ಸಭೆ ನಡೆಸಿದ್ದ ಸಿಎಂ ಬಾಕಿ ಪಾವತಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದ ಹಿನ್ನಲೆಯಲ್ಲಿ ಮುಟ್ಟುಗೋಲಿಗೆ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos