ನಬಾರ್ಡ್ ನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ನಬಾರ್ಡ್ ನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಬೆಂಗಳೂರು, ಮೇ. 10,ನ್ಯೂಸ್ ಎಕ್ಸ್ ಪ್ರೆಸ್: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನಲ್ಲಿ ಖಾಲಿ ಇರುವ 8 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಭಾರತದಾದ್ಯಂತ ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆ (RDBS)ಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 26,2019 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಮ್ಯಾನೇಜರ್ ಹುದ್ದೆಗಳಿಗೆ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವಿವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,150/- ರಿಂದ 62,400/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 900/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದು.

 

ಫ್ರೆಶ್ ನ್ಯೂಸ್

Latest Posts

Featured Videos