ನವದೆಹಲಿ, ಮೇ.11, ನ್ಯೂಸ್ ಎಕ್ಸ್ ಪ್ರೆಸ್: ಏರ್ ಇಂಡಿಯಾ ಲಿಮಿಟೆಡ್ ನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಲೈಡ್ ಸರ್ವೀಸಸ್ ನಲ್ಲಿ ಖಾಲಿ ಇರುವ ಕೋ-ಪೈಲಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಅಭ್ಯರ್ಥಿಗಳು 10+2 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ವಯೋಮಿತಿ : ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 2,11,000/- ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅರ್ಜಿದಾರರು 3000/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯಂತೆ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ನವೆಂಬರ್ 30,2019 ರೊಳಗೆ ಕಳುಹಿಸಬಹುದು.
ಕಚೇರಿಯ ವಿಳಾಸ: ಅಲ್ಲೈನ್ಸ್ ಏರ್, ಪರ್ಸನಲ್ ಡಿಪಾರ್ಟ್ಮೆಂಟ್ (ಅಲ್ಲೈನ್ಸ್ ಭವನ), ಡೊಮೆಸ್ಟಿಕ್ ಟರ್ಮಿನಲ್ -1, ಜಿ.ಐ ಏರ್ಪೋರ್ಟ್,ನವದೆಹಲಿ-110037