ಸೈಲ್ ನೇಮಕಾತಿ 142 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೈಲ್ ನೇಮಕಾತಿ 142 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಮೇ . 28, ನ್ಯೂಸ್ ಎಕ್ಸ್ ಪ್ರೆಸ್: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್ಎಐಎಲ್) ನೇಮಕಾತಿ 142 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಜೂನ್ 14,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಇಂಜಿನಿಯರಿಂಗ್ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಜೂನ್ 14,2019ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,600/- ರಿಂದ 46,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಗುಂಪು ಚರ್ಚೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ / ಮಾಜಿ ಸೈನಿಕ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಅಥವಾ ಚಲನ್ ನಲ್ಲಿ ಪಾವತಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅಧಿಕೃತ ವೆಬ್ ಸೈಟ್ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸಲ್ಲಿಸಬಹುದು.

ಫ್ರೆಶ್ ನ್ಯೂಸ್

Latest Posts

Featured Videos