ಪೋಸೋಕೋ ನೇಮಕಾತಿ: ಎಕ್ಸಿಕ್ಯುಟಿವ್ ಮತ್ತು ಅಸಿಸ್ಟೆಂಟ್ ಆಫೀಸರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪೋಸೋಕೋ ನೇಮಕಾತಿ: ಎಕ್ಸಿಕ್ಯುಟಿವ್ ಮತ್ತು ಅಸಿಸ್ಟೆಂಟ್ ಆಫೀಸರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಏ. 4, ನ್ಯೂಸ್ ಎಕ್ಸ್ ಪ್ರೆಸ್: ಪವರ್ ಸಿಸ್ಟಮ್ ಆಪರೇಷನ್ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಎಕ್ಸಿಕ್ಯುಟಿವ್ ಟ್ರೈನಿ (ಹೆಚ್ಆರ್), ಅಸಿಸ್ಟೆಂಟ್ ಆಫೀಸರ್ ಟ್ರೈನಿ (ಪಿಆರ್) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಪವರ್ ಇಂಡಸ್ಟ್ರಿಯ ಅಧಿಕೃತ ವೆಬ್ಸೈಟ್ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಜೂನ್ 20,2019 ರೊಳಗೆ ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಎಕ್ಸಿಕ್ಯುಟಿವ್ ಟ್ರೈನಿ (ಹೆಚ್ಆರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ / ಸ್ನಾತಕೋತ್ತರ ಪದವಿ ಡಿಪ್ಲೋಮ / ಎಂಬಿಎ ಹೆಚ್ಆರ್/ ಪರ್ಸನಲ್ ಮ್ಯಾನೇಜ್ಮೆಂಟ್ / ಇಂಡಸ್ಟ್ರಿಯಲ್ ರಿಲೇಶನ್ಸ್ / ಸೋಶಿಯಲ್ ವರ್ಕ್ ಅನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಶೇ.60%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಸಮನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅಸಿಸ್ಟೆಂಟ್ ಆಫೀಸರ್ ಟ್ರೈನಿ (ಪಿಆರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಜೊತೆಗೆ ಸ್ನಾತಕೋತ್ತರ ಪದವಿ ಅಥವಾ ಸ್ನಾತಕೋತ್ತರ ಪದವಿ ಡಿಪ್ಲೋಮ ಅನ್ನು ಸಮೂಹ ಸಂವಹನ/ ಪಬ್ಲಿಕ್ ರಿಲೇಶನ್ಸ್ / ಪತ್ರಿಕೋದ್ಯಮ ಅನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಲ್ಲಿ ಶೇ.60%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಸಮನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ: 31.7.2019ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 60,000/-ರಿಂದ 1,80,000/-ರೂ ಮತ್ತು

ಅಸಿಸ್ಟೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/- ರಿಂದ 1,60,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಯುಜಿಸಿ ಎನ್ಇಟಿ ಜೂನ್ 2019ರ ಅಂಕಗಳ ಆಧಾರದ ಮೇಲೆ ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು 500/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದು.

 

ಫ್ರೆಶ್ ನ್ಯೂಸ್

Latest Posts

Featured Videos