ಭಾರತೀಯ ನೇವಿ ನೇಮಕಾತಿ ಚಾರ್ಜ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೇವಿ ನೇಮಕಾತಿ ಚಾರ್ಜ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏ. 8, ನ್ಯೂಸ್ ಎಕ್ಸ್ ಪ್ರೆಸ್: ಭಾರತೀಯ ನೇವಿ ನೇಮಕಾತಿ ಚಾರ್ಜ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಭಾರತೀಯ ನೇವಿಯ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಏ. 28.2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಚಾರ್ಜ್ಮ್ಯಾನ್ (ಮೆಕ್ಯಾನಿಕ್) ಹುದ್ದೆಗಳಿಗೆ ಡಿಪ್ಲೋಮ (ಮೆಕ್ಯಾನಿಕಲ್/ ಇಲೆಕ್ಟ್ರಿಕಲ್ / ಇಲೆಕ್ಟ್ರಾನಿಕ್ಸ್ /ಪ್ರೊಡಕ್ಷನ್ ಇಂಜಿನಿಯರಿಂಗ್) ಮತ್ತು ಚಾರ್ಜ್‌ಮ್ಯಾನ್ ( ಅಮ್ಯುನಿಷನ್ ಮತ್ತು ಎಕ್ಸ್ಪೋಸಿವ್) ಹುದ್ದೆಗಳಿಗೆ ಡಿಪ್ಲೋಮ ( ಕೆಮಿಕಲ್ ಇಂಜಿನಿಯರಿಂಗ್) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್ ನಿಂದ ಉತ್ತೀರ್ಣ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಚಾರ್ಜ್ಮ್ಯಾನ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 205/-ರೂ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು: ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಇಂಡಿಯನ್ ನೇವಿಯ ಅಧಿಕೃತ ವೆಬ್‌ಸೈಟ್‌https://www.joinindiannavy.gov.in/ ಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದು.

 

ಫ್ರೆಶ್ ನ್ಯೂಸ್

Latest Posts

Featured Videos