ನೌಕಾಪಡೆಯಲ್ಲಿ 172 ಹುದ್ದೆಗಳಿಗೆ ನೇಮಕಾತಿ

ನೌಕಾಪಡೆಯಲ್ಲಿ 172 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು. 9, ನ್ಯೂಸ್ ಎಕ್ಸ್ ಪ್ರೆಸ್: ಭಾರತೀಯ ನೌಕಾಪಡೆ 172 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 28/4/2019 ಕೊನೆಯ ದಿನವಾಗಿದೆ. ಭಾರತೀಯ ನೌಕಾಪಡೆ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ : ಭಾರತೀಯ ನೌಕಾಪಡೆ ನೇಮಕಾತಿಗೆ ಅಭ್ಯರ್ಥಿಗಳು 16/4/2019 ರಿಂದ 28/4/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos