ಪ್ರಪಂಚದ ಪ್ರಸಿದ್ದ ಎತ್ತರದ ಜಪಾತವೇ ಜೋಗ

ಪ್ರಪಂಚದ ಪ್ರಸಿದ್ದ ಎತ್ತರದ ಜಪಾತವೇ ಜೋಗ

ಜೋಗ, ಸೆ. 24:  ‘ಗೇರುಸೊಪ್ಪಿನ ಜಲಪಾತ’ ಪ್ರಪಂಚದ ಪ್ರಸಿದ್ಧ ಜಲಪಾತಗಳಲ್ಲೊಂದು. ಭಾರತದ 2ನೆಯ ಅತಿ ಎತ್ತರದ ಜಲಪಾತ. ಸಿದ್ದಾಪುರ ತಾಲೂಕಿನ ಉತ್ತರ ಕನ್ನಡ ಜಿಲ್ಲೆಯಿಂದ ಧುಮುಕುವ ಜೋಗ ನೋಡುವ ದ್ರಶ್ಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ದಟ್ಟವಾದ ಕಾಡು ಹಾಗು ಗುಡ್ಡಗಳಿಂದ ಆವೃತ್ತವಾದ ಜೋಗ ಕರ್ನಾಟಕದ ಒಂದು ಪ್ರಮುಖ ಪ್ರವಾಸಿ ತಾಣ.

ಸುಮಾರು 292 ಮೀ ಎತ್ತರದಿಂದ ಭೋರ್ಗರೆಯುತ್ತಾ ಶರಾವತಿ ನದಿಯು 4 ಸೀಳಾಗಿ ಧುಮುಕುತ್ತದೆ. ವೈಭವದಿಂದ ಅವ್ಯಾಹತವಾಗಿ ಧುಮಕುವ ರಾಜ, ಜೋರಾಗಿ ಆರ್ಭಟಿಸುತ್ತ ಹಲವಾ

ರು ಭಾರಿ ಚಿಮ್ಮುತ್ತ ಧುಮಕುವ ರೋರರ್, ಬಳಕುತ್ತಾ ಜಾರುವ ರಾಣಿ(ಲೇಡಿ) ಮತ್ತು ರಭಸದಿಂದ ಹಲವಾರು ಬಂಡೆಗಳನ್ನು ಚಿಮ್ಮುತ್ತಾ ನುಗ್ಗುವ ರಾಕೆಟ್ 4 ಜಲ ಭಾಗಗಳಾಗಿವೆ.

ಮಳೆಗಾಲದಲ್ಲಿ ಅತ್ಯ೦ತ ರಮಣೀಯರೂಪ ತೊಡುವ ಜಲಪಾತ. ಬಿಳಿ ಮೋಡಗಳ ಹಿಂದೆ ಕಣ್ಣಾಮುಚ್ಚಾಲೆ ಆಡುತ್ತ ನೋಡುಗರ ಕಣ್ಮನ ಸೆಳೆಯುವುದು. ಲಿಂಗನಮಕ್ಕಿ ಜಲಾಶಯದ ನಿರ್ಮಾಣದ ನಂತರ ಜೋಗ ತನ್ನ ಮೊದಲಿನ ಸೌಂದರ್ಯ ಹಾಗು ವೈಭವವನ್ನು ಕಳೆದುಕೊಂಡಿದೆ ಎಂದು ಅನೇಕರು ಹೇಳುತ್ತಾರೆ.

ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಗಡಿ ಮ

ಧ್ಯೆ ಇರುವ ಜಲಪಾತ ಸಾಗರ ತಾಲ್ಲೂಕಿನ ತಾಳಗುಪ್ಪ ರೈಲು ನಿಲ್ದಾಣಕ್ಕೆ 16 ಕಿಮೀ ದೂರದಲ್ಲಿದೆ. ಜಲಪಾತ ಶಿವಮೊಗ್ಗದಿಂದ 100 ಕಿಮೀ ದೂರದಲ್ಲೂ, ಹೊನ್ನಾವರದಿಂದ 56 ಕಿಮೀ ದೂರದಲ್ಲೂ ಇದೆ. ಇಲ್ಲಿ ಶರಾವತಿ ನದಿ 252.7 ಮೀ (829 ಅಡಿ) ಆಳದ ಪ್ರಪಾತಕ್ಕೆ ಧುಮುಕುತ್ತದೆ. ಸೌಂದರ್ಯಪೂರ್ಣ ಔನ್ನ

ತ್ಯದಲ್ಲಿ ಗೇರುಸೊಪ್ಪೆಯನ್ನು ಮೀರಿಸುವ ಜಲಪಾತ ಜಗತ್ತಿನಲ್ಲೆಲ್ಲೂ ಇಲ್ಲ.

4 ಪ್ರತ್ಯೇಕ ಬಿರುಕುಗಳಿಂದ ನದಿ ರಭಸದಿಂದ ಇಳಿದು ಕಮರಿಗೆ ಬೀಳುತ್ತದೆ. ಧುಮುಕುವ ಠೀವಿ ಮನಮೋಹಕವಾದ್ದು, ಜಲಪಾತದ ನಾಲ್ಕು ಕವಲುಗಳ ಪೈಕಿ ರಾಜಾ ಸುಮಾರು 829 ಅಡಿ ಆಳಕ್ಕೆ ಧುಮುಕುತ್ತದೆ. ರಾಜಾ ಬೀಳುತ್ತಿರುವಂತೆಯೇ ಸ್ವಲ್ಪ ಕೆಳಗೆ, ಬಂಡೆಯ ಬಿರುಕಿನಿಂದ ಹರಿದು ಬೀಳುವ ರೋರರ್

ಜಲಪಾತವನ್ನು ಅಪ್ಪಿಕೊಂಡು, ಅದರೊಂದಿಗೆ ಕಮರಿಗೆ ಬೀಳುತ್ತದೆ.

3ನೇ ಜಲಪಾತ ರಾಕೆಟ್ ಬಂಡೆಯ ಮೇಲಿನಿಂದ ಹಲವು ಧಾರೆಗಳಲ್ಲಿ ಚಿಮ್ಮಿ ತಳಕ್ಕೆ ಕುಪ್ಪಳಿಸುತ್ತದೆ. 4ನೇ ರಾಣಿ ಜಲಪಾತ (ಲೇಡಿ ಬ್ಲಾಂಚೆ) ಬೀಳುವ ರಭಸದಿಂದೇಳುವ ನೊರೆಯಿಂದ ತುಂಬಿ ಸೊಗಸುಗಾತಿಯಂತೆ ಪ್ರಪಾತಕ್ಕೆ ಇಳಿಯುತ್ತದೆ.

ಮಳೆಗಾಲದ ಅನಂತರದ ತಿಂಗಳುಗಳಲ್ಲಿ ನದಿಯ ಪ್ರವಾಹ ಸರಿಯಾದ ಗಾತ್ರದಲ್ಲಿರುವುದರಿಂದ ಜಲಪಾತ ನೋಡಲು ರಮ್ಯವಾಗಿರುತ್ತದೆ. ಜಲಪಾತದ ಪೂರ್ಣ ದೃಶ್ಯವನ್ನು ಶಿವಮೊಗ್ಗ ಗಡಿ ಭಾಗದಿಂದ ನೋಡಬಹುದು. ಜಲಪಾತದ ಬಂಡೆಯ ಅಂಚುಗಳಲ್ಲಿರುವ ಪೊಟರೆಗಳಲ್ಲಿ ಕಾಡು ಪಾರಿವಾಳಗಳು ಮನೆ ಮಾಡಿಕೊಂಡು ಪ್ರಪಾತದ ಬಳಿ ಗುಂಪುಗುಂಪಾಗಿ ಹಾರುತ್ತಿರುತ್ತವೆ.

ಜೊತೆಗೆ ಬಿಸಿಲು ಹರಿದಂತೆ ಜಲಧರೆಗಳ ಮೇಲಿನ ಕಾಮನಬಿಲ್ಲುಗಳು ನಿತ್ಯ ನವ್ಯವಾಗಿ ಕಾಣಿಸುವುವು. ಬೆಳದಿಂಗಳ ರಾತ್ರಿಯಲ್ಲೂ ಕಾಮನಬಿಲ್ಲು ಕಾಣಿಸುವುದುಂಟು. ಈ ಜೀವಂತ ಪ್ರವಾಹದ ಸೌಮ್ಯ-ಭೀಕರತೆಗಳ ವರ್ಣನೆ ಮಾತಿಗೆ ನಿಲುಕದ್ದು. ಗೇರುಸೊಪ್ಪೆ ಜಲಪಾತದ ಮಾಹಿತಿ ಗಳನ್ನು ಸಂಗ್ರಹಿಸಲು ಮಾರ್ಚ್ 1856ರಲ್ಲಿ ಬಂದ ಇಬ್ಬರು ಬ್ರಿಟಿಷ್ ನೌಕಾಧಿಕಾರಿಗಳ ವರದಿಯಂತೆ- ಪ್ರಪಾತದ ಆಳ 829 ಅಡಿಗಳು. ಪ್ರಪಾತದ ತಳದಲ್ಲಿ ನದಿ ಕೊರೆದಿರುವ ಮಡುವಿನ ಆಳ 129 ಅಡಿಗಳು.

ಮಹಾತ್ಮ ಗಾಂಧಿ ಜಲ ವಿದ್ಯುತ್ ಯೋಜನೆ

ಮಹಾತ್ಮ ಗಾಂಧಿ ಜಲ ವಿದ್ಯುತ್ ಯೋ

ಜನೆ ಜೋಗ ಜಲಪಾತದ ಬಳಿ ಇರುವ ವಿದ್ಯುತ್ ಸ್ಥಾವರ. ಸ್ವಾತಂತ್ರಪೂರ್ವದಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರು ಮೊದಲ ಬಾರಿ ಜೋಗಕ್ಕೆ ಭೇಟಿಯಿತ್ತಾಗ ಜೋಗ ಜಲಪಾತವನ್ನು ನೋಡಿ “ಎಂತಹ ವ್ಯರ್ಥ” ಎಂದು ಉದ್ಗರಿಸಿದರಂತೆ. ಅವರ ಮಾತಿನ ಫಲಶ್ರುತಿ ಜಲವಿದ್ಯುತ್ ಆಗರ. 1930 ರ ದಶಕದ ಪೂರ್ವಭಾಗದಲ್ಲಿ ಮೈಸೂರು ಲೋಕೋಪಯೊಗಿ ಇಲಾಖೆಯಿಂದ ಜಲವಿದ್ಯುತ್ ಯೋಜನಾ ಕಾರ್ಯ ಶುರುವಾಯಿತು.

ಮೊದಲ ಹಂತದ ಕೆಲಸ 1939ರಲ್ಲಿ ಜೋಗ ಜಲಪಾತದಿಂದ 24 ಕಿ. ಮಿ. ದೂರದಲ್ಲಿರುವ ಹಿರೆಭಾಸ್ಕರ ಎಂಬ ಸ್ಥಳದಲ್ಲಿ ಶುರುವಾಯಿತು. ಮೊದಲು ಕೃಷ್ಣರಾಜೇಂದ್ರ ಜಲವಿದ್ಯುತ್ ಯೋಜನೆಯೆಂದು ಕರೆಯಲ್ಪಡುತಿದ್ದ ಯೋಜನೆಯನ್ನು ನಂತರ ಮಹಾತ್ಮ ಗಾಂಧಿ ಜಲವಿದ್ಯುತ್ ಯೊಜನೆಯೆಂದು ನಾಮಕರಣ ಮಾಡಲಾಯಿತು.

ಫೆಬ್ರುವರಿ 21., 1949 ರಲ್ಲಿ ಉದ್ಘಾಟನೆಯಾದ ಈ ವಿದ್ಯುತ್ ಸ್ಥಾವರ 120 ಮೆಗಾವ್ಯಾಟ್ ವಿದ್ಯುಚ್ಛಕ್ತಿ ಉತ್ಪಾದಿಸುವ ಕ್ಷಮತೆಯನ್ನು ಹೊಂದಿದೆ. ಮೊದಲು ಹಿರೆಭಾಸ್ಕರ ಜಲಾಶಯದಿಂದ ಈ ಯೊಜನೆಗೆ ನೀರಿನ ಸರಬರಾಜಾಗುತ್ತಿತ್ತು. 60 ರ ದಶಕದಲ್ಲಿ ಲಿಂಗನಮಕ್ಕಿ ಜಲಾಶಯ ಪ್ರಾರಂಭವಾದ ನಂತರ ಅದೆ ಈ ಯೋಜನೆಗೆ ನೀರಿನ ಮೂಲ.

 

 

 

 

ಫ್ರೆಶ್ ನ್ಯೂಸ್

Latest Posts

Featured Videos