ಕಾಂಗ್ರೆಸ್ ಪಕ್ಷಕ್ಕೆ ಸೇರಿದ ದೀಪಕ್ ತಿಮ್ಮಯ್ಯ

ಕಾಂಗ್ರೆಸ್ ಪಕ್ಷಕ್ಕೆ ಸೇರಿದ ದೀಪಕ್ ತಿಮ್ಮಯ್ಯ

ಬೆಂಗಳೂರು: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಸದಾಶಿವನಗರ ನಿವಾಸದಲ್ಲಿ ಇಂದು ದೀಪಕ್ ತಿಮ್ಮಯ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದೆಸಿ, ಹೂಗುಚ್ಛ ನೀಡಿ ಪಕ್ಷಕ್ಕೆ ಬರಮಾಡಿಕೊಂಡ ಶಿವಕುಮಾರ್ ಅವರು ನಂತರ ಮಾಧ್ಯಮಗಳ ಜತೆ ಮಾತನಡಿದರು.

“ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು,ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ ಅವರು ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ನನಗೆ ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಮನವಿ ಮಾಡಿದ್ದೆ. ಅದನ್ನು ಒಪ್ಪಿ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಆಗಿದ್ದು, ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಾರೆ.”

ಫ್ರೆಶ್ ನ್ಯೂಸ್

Latest Posts

Featured Videos