ಮಾಜಿ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭ ಇಂದು ಬಿಜೆಪಿ ಸೇರ್ಪಡೆ

ಮಾಜಿ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭ ಇಂದು ಬಿಜೆಪಿ ಸೇರ್ಪಡೆ

ಕಲ್ಬುರ್ಗಿ, ಏ. 3, ನ್ಯೂಸ್ ಎಕ್ಸ್ ಪ್ರೆಸ್: ಸರ್ಕಾರದ ನಿವೃತ್ತ ಕಾರ್ಯದರ್ಶಿ ಕೆ ರತ್ನಪ್ರಭಾ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನವು ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಬಿಜೆಪಿ ಮೂಲಗಳು ಮಾಹಿತಿ ನೀಡಿದ್ದು, ರಾಜ್ಯ ಕಾರ್ಯದರ್ಶಿಯಾಗಿ ಈ ಹಿಂದೆ ಕೆಲಸ ನಿರ್ವಹಿಸಿದ್ದ ಕೆ.ರತ್ನಪ್ರಭ ಬಿಜೆಪಿ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಸ್ವತಃ ಬಿಜೆಪಿಯ ಕಲಬುರ್ಗಿ ಲೋಕಸಭಾ ಅಭ್ಯರ್ಥಿ ಉಮೇಶ್ ಜಾಧವ್ ಅವರು ಮಾಹಿತಿ ನೀಡಿದ್ದು, ಕಲಬುರ್ಗಿಯಲ್ಲಿ ಉಮೇಶ್ ಜಾಧವ್ ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿತ್ತು. ರತ್ನಪ್ರಭಾ ಅವರನ್ನು ಅಭ್ಯರ್ಥಿಯಾಗಿ ಮಾಡಿದರೆ ದಲಿತ ಸಮುದಾಯದ ಮತಗಳ ಜೊತೆಗೆ ಪ್ರಜ್ಞಾವಂತರ ಮತಗಳು ಸಹ ಬಿಜೆಪಿಗೆ ಬರುತ್ತದೆ ಎನ್ನುವುದು ಬಿಜೆಪಿಯ ಕಲ್ಪನೆಯಾಗಿದೆ. ಇಂದು ಕಲಬುರ್ಗಿಯಲ್ಲಿ ಬೃಹತ್ ಮೆರವಣಿಗೆ ಮುಖಾಂತರ ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ ಜಾಧವ್ ಅವರು, ಮೆರವಣಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಸಾಥ್ ನೀಡಲಿದ್ದಾರೆ. ಅಂತೆಯೇ ಇದೇ ಸಂದರ್ಭದಲ್ಲಿ ಕೆ. ರತ್ನಪ್ರಭ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಜಾಧವ್ ಮಾಹಿತಿ ನೀಡಿದ್ದಾರೆ. ಹೈದರಾಬಾದ್ ಮೂಲದ ರತ್ನಪ್ರಭಾ ಅವರು 1981ನೇ ಬ್ಯಾಚ್ ಐಎಎಸ್ ಅಧಿಕಾರಿ. ತಂದೆ ಸಿವಿಲ್ ಇಂಜಿನಿಯರ್ ಆಗಿದ್ದರು. ತಾಯಿ ವೈದ್ಯೆ. ರತ್ನಪ್ರಭಾ ಅವರ ಸಹೋದರ ಸಹ ನಾಗರಿಕಸೇವೆಯಲ್ಲಿದ್ದಾರೆ. ಕುಮಾರಸ್ವಾಮಿ 1981ರಲ್ಲಿ ಅಸಿಸ್ಟೆಂಟ್ ಕಮಿಷನರ್ ಆಗಿ ಬೀದರ್‌ನಲ್ಲಿ ರತ್ನಪ್ರಭಾ ಅವರು ಸೇವೆ ಆರಂಭಿಸಿದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos