ಕೆ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

ಕೆ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಕನ್ನಡದಲ್ಲಿ ಐಎಎಸ್ ಮಾಡಿದ ಮೊದಲ ಅಧಿಕಾರಿ ಹಾಗೂ ಬಾ ನಲ್ಲೆ ಮಧುಚಂದ್ರಕೆ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿರುವ ಕೆ.ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅನಾರೋಗ್ಯದಿಂದಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಹಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಕೆ ಶಿವರಾಮ್ ಅವರಿಗೆ 71 ವರ್ಷ ವಯಸ್ಸಾಗಿದ್ದು, ಇಂದು ಅವರಿಗೆ ಹೃದಯಾಘಾತವಾಗಿದೆ. ಶಿವರಾಮ್ ಅವರ ಮೆದುಳು ನಿಷ್ಕ್ರಿಯವಾಗಿದೆ ಎನ್ನಲಾಗುತ್ತಿದ್ದು, ವೈದ್ಯರು ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ.

ಕೆ ಶಿವರಾಮ್ ಅವರು ಐಎಎಸ್ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ನಿವೃತ್ತರಾದ ಬಳಿಕ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಕೆ ಶಿವರಾಮ್, 2013 ರಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದರು, ಬಳಿಕ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು, 2016ರ ಬಳಿಕ ಬಿಜೆಪಿ ಪಕ್ಷ ಸೇರಿದ್ದರು. ಇದಲ್ಲದೆ, ಛಲವಾದಿ ಮಹಾಸಭಾದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಶಿವರಾಮ್ ಅವರ ಅಳಿಯ ಭರತ್ ನೀಡಿರುವ ಮಾಹಿತಿಯಂತೆ, 20 ದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಆರೋಗ್ಯ ಚಿಂತಾಜನಕ ಆಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರಿಗೆ ಡಯಾಲಿಸಿಸ್ ನೀಡಲಾಗುತ್ತಿದೆ. ಶಿವರಾಮ್ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ ಎಂದಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos